ಸಾರಾಂಶ
ಸಿಂದಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಸಂತೋಷ ಹರನಾಳ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸಂತೋಷ ಹರನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಮಡರು.
ಸಿಂದಗಿ: ತಾಲೂಕು ಜೆಡಿಎಸ್ ಅಧ್ಯಕ್ಷ ಸಂತೋಷ ಹರನಾಳ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸಂತೋಷ ಹರನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಮಡರು. ಮಾಜಿ ಶಾಸಕ ರಮೆಶ ಭೂಸನೂರ, ಬಿಜೆಪಿ ಮುಖಂಡ ಸಂತೋಷ ಪಾಟೀಲ ಡಂಬಳ, ಮಲ್ಲಿಕಾರ್ಜುನ ಸಾವಳಸಂಗ, ಗುರು ತಳವಾರ, ಮಡಿವಾಳಪ್ಪಗೌಡ ಬಿರಾದಾರ ಈ ವೇಳೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂತೋಷ ಹರನಾಳ ಮಾತಾನಾಡಿ, ಸಿಂದಗಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ಥಿತ್ವ ಇಲ್ಲದಂತಾಗಿದೆ. ಇದರಿಂದ ನಾನು ಪಕ್ಷ ತ್ಯಜಿಸುವುದು ಅನಿವಾರ್ಯವಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ವಿಜಯೇಂದ್ರ ನಾಯಕತ್ವವನ್ನು ಮೆಚ್ಚಿ ನಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಈ ಬಾರಿ ಮೊತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲ ಶ್ರದ್ಧೆಯಿಂದ ಈ ಬಾರಿಯ ಲೋಕಸಭಾ ಚುಣಾವಣೆಯನ್ನು ಎದುರಿಸುತ್ತೇವೆ ಎಂದರು.