ಸಾರಾಂಶ
ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಲೂಟಿ ಆರೋಪ ಕೇಳಿಬಂದಿದ್ದು, ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ನಗರವನ್ನು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು.
ಗುರುವಾರ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇವಲ ಪ್ರಚಾರಕ್ಕೆ ಮಾತ್ರ ಬ್ರ್ಯಾಂಡ್ ಬೆಂಗಳೂರು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಬೆಂಗಳೂರು ನಗರ ಮೂಲಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಪಕ್ಷದ ನಾಯಕರಾದ ಕನ್ಯಾಕುಮಾರಿ, ಮಂಗಳಾ ರಾಜು, ಕವಿತಾ ರಾಮಚಂದ್ರ, ಸುಜಾತಾ, ಶೀಲಾ ನಾಗರಾಜ್ ಇತರರು ಭಾಗವಹಿಸಿದ್ದರು.