ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ತೀವ್ರ ಬರಗಾಲ ಆವರಿಸಿದೆ. ರಾಜ್ಯದಲ್ಲಿ ಒಟ್ಟು 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲ 7 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಮಳೆ ಬಾರದೇ ಮೆಕ್ಕೆಜೋಳ, ರಾಗಿ, ಜೋಳ, ಭತ್ತದ ಬೆಳೆ ಬಹುತೇಕ ನಾಶವಾಗಿದೆ. ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಬರ ಪರಿಹಾರವನ್ನು ನೀಡಿಲ್ಲ ಎಂದು ಮುಖಂಡರು ಆರೋಪಿಸಿದರು.
ಬರ ಹಿನ್ನೆಲೆ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ, ವರದಿ ನೀಡಿದ್ದರೂ ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ದನ, ಕರು, ಜಾನುವಾರುಗಳು ನೀರು ಹಾಗೂ ಮೇವಿನ ಕೊರತೆಯಿಂದಾಗಿ ಸಾವು-ಬದುಕಿನ ಹೋರಾಟದಲ್ಲಿ ನರಳುತ್ತಿವೆ. ಸಾಲ ಮಾಡಿ ಬಿತ್ತಿದ ಬೆಳೆಗಳು ನಾಶವಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕೂಲಿ ಕಾರ್ಮಿಕರು ಬದುಕಿಗಾಗಿ ಬೇರೆ ಪ್ರದೇಶಗಳಿಗೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಆದರೂ, ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಶಾಸಕಿ ಶಾರದಾ ಪೂರ್‍ಯಾ ನಾಯ್ಕ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪಕ್ಷದ ಮುಖಂಡರಾದ ಶಾರದಮ್ಮ ಎಂ.ಜೆ.ಅಪ್ಪಾಜಿ, ನಗರಾಧ್ಯಕ್ಷ ದೀಪಕ್ ಸಿಂಗ್, ಮುಖಂಡರಾದ ಸಂತೋಷ್ ಎಂ.ಎಸ್., ಎಸ್.ಪಿ. ಶಿವಣ್ಣ, ಗೋವಿಂದಪ್ಪ, ಕೆ.ಎನ್. ರಾಮಕೃಷ್ಣ, ನರಸಿಂಹ ಗಂಧದಮನೆ, ತ್ಯಾಗರಾಜ್ ಭಾಗವಹಿಸಿದ್ದರು.- - - ಬಾಕ್ಸ್ ಬೇಡಿಕೆಗಳೇನು? - ರೈತರಿಗೆ ಕನಿಷ್ಠ 7 ಗಂಟೆ ವಿದ್ಯುತ್ ಒದಗಿಸಬೇಕು
- ಬೆಳೆ ನಾಶಕ್ಕೆ ಪರಿಹಾರದ ಹಣ ಬಿಡುಗಡೆ ಮಾಡಬೇಕು- ಕುಡಿಯುವ ನೀರಿನ ಬವಣೆ ನೀಗಿಸಲು ಕೊಳವೆಬಾವಿ ತೋಡಿಸಲು ಅನುದಾನ ಬಿಡುಗಡೆ ಮಾಡಬೇಕು
- ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರನ್ನು ನಿರಂತರವಾಗಿ ಸರಬರಾಜು ಮಾಡಬೇಕು- ಬೆಳೆ ವಿಮೆ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ನೀಡಬೇಕು
- ರೈತರ ಅಡಕೆ ಸುಲಿಯುವ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ದರ ಏರಿಕೆ ರದ್ದುಪಡಿಸಬೇಕು- - - -22ಎಸ್‌ಎಂಜಿಕೆಪಿ04:
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.