ಕನ್ನಡಪ್ರಭ ವಾರ್ತೆ ಬೆಳಗಾವಿಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮತ್ತು ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮತ್ತು ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹಾಲು, ಮೊಸರು, ತುಪ್ಪ, ಬೆಣ್ಣೆ ಹಾಗೂ ಪನ್ನೀರ್ ದರ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಿದೆ. ಸರ್ಕಾರ ಕೂಡಲೇ ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ರೈತರು ಹಾಗೂ ಜನಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಆದೇಶವನ್ನು ತಡೆಹಿಡಿಯಬೇಕು. ಬರಪೀಡಿತ ರೈತರು ಮತ್ತು ಜಾನುವಾರು ಸಾಕಣೆದಾರರಿಗೆ ವಿಶೇಷ ಪರಿಹಾರ ಕಲ್ಪಿಸುವುದರ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.ಅಕ್ಕಿ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕು. ಕಬ್ಬು ಬೆಳೆಗಾರರಿಗೆ ಸೂಕ್ತ ದರ ನಿಗದಿಪಡಿಸಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಕ್ಷದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಬಿ.ಎಸ್.ರುದ್ರಗೌಡರ, ಪ್ರಕಾಶ ಸೋನವಾಲಕರ, ಈರಣ್ಣ ರೇವಡಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.