ಸಕಲೇಶಪುರ-ಆಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮತ್ತು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಕೆ. ಎಸ್. ಮಂಜೇಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಆಲೂರು ತಾಲೂಕು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಆಲೂರುರಾಜ್ಯದ ಕಾಂಗ್ರೆಸ್ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾರ್ವಜನಿಕರು, ಬಡವರು ಹಾಗೂ ಮಧ್ಯಮ ವರ್ಗದ ಜನರ ಮೇಲೆ ಭಾರೀ ಹೊರೆಯನ್ನು ಹಾಕಿದೆ ಎಂದು ಆರೋಪಿಸಿ ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಸಕಲೇಶಪುರ-ಆಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮತ್ತು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಕೆ. ಎಸ್. ಮಂಜೇಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಆಲೂರು ತಾಲೂಕು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸರ್ಕಾರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ, ‘ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಈಗ ಅಗತ್ಯ ವಸ್ತುಗಳಾದ ಹಾಲು, ಮೊಸರು ಹಾಗೂ ಸಾರಿಗೆ ಸಂಸ್ಥೆಯ ಬಸ್ ದರವನ್ನು ದಿಢೀರನೆ ಏರಿಕೆ ಮಾಡುವ ಮೂಲಕ ಬಡವರ ಮತ್ತು ಮಧ್ಯಮ ವರ್ಗದ ಜನರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ದಿನನಿತ್ಯದ ಜೀವನ ನಿರ್ವಹಣೆಯೇ ಜನರಿಗೆ ಕಷ್ಟಕರವಾಗಿರುವಾಗ ಈ ಪರಿ ಬೆಲೆ ಏರಿಕೆ ಮಾಡಿರುವುದು ಸರ್ಕಾರದ ಜನವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಹಾಲಿನ ದರವನ್ನ 8 ಏರಿಕೆ ಮಾಡಿರುವುದರಲ್ಲಿ ರೈತರಿಗೆ ಏಳು ರೂಪಾಯಿಗಳನ್ನು ಕೊಡುವುದಾಗಿ ಸರ್ಕಾರ ತಿಳಿಸಿದೆ ಆದರೆ ಮೊಸರಿನ ದರವನ್ನ 14 ರುಪಾಯಿಗಳಿಗೆ ಏರಿಕೆ ಮಾಡುವ ಮೂಲಕ ಬಡವರಿಗೆ,ಕೂಲಿ ಕಾರ್ಮಿಕರಿಗೆ,ಮಧ್ಯಮವರ್ಗದವರಿಗೆ ದುಬಾರಿ ಜೀವನ ನಿರ್ವಹಣೆಯ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ ಆದುದರಿಂದ ಈ ಸರ್ಕಾರವು ತಕ್ಷಣವೇ ಏರಿಸಲಾದ ದರಗಳನ್ನು ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು " ಎಂದು ಎಚ್ಚರಿಸಿದರು.ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರಕ್ಕೆ ತಕ್ಕ ಪಾಠ: ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ ಮಾತನಾಡಿ, ‘ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದಾಗಿ ಇಡೀ ಸಮಾಜ ಸಂಕಷ್ಟಕ್ಕೆ ಸಿಲುಕಿದೆ. ಹಾಲು, ಮೊಸರು ಸೇರಿದಂತೆ ಮೂಲಭೂತ ಅಗತ್ಯಗಳ ಬೆಲೆ ಏರಿಕೆಯಿಂದಾಗಿ ಬಡ ಕುಟುಂಬಗಳ ಆಯವ್ಯಯ ಸಂಪೂರ್ಣವಾಗಿ ತಲೆಕೆಳಗಾಗಿದೆ. ಬಸ್ ದರ ಏರಿಕೆಯಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಕೂಲಿ ಕಾರ್ಮಿಕರಿಗೆ, ದೈನಂದಿನ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಮರೆತು ಆಡಳಿತ ನಡೆಸುತ್ತಿರುವ ಈ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ಎಂದರು.ಪ್ರತಿಭಟನೆಯಲ್ಲಿ ತಾಲೂಕಿನ ಪ್ರಮುಖ ಜೆಡಿಎಸ್ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.