ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

| Published : Sep 27 2024, 01:24 AM IST

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮೈಸೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಲಾಗಿದೆ. ಹಾಗಾಗಿ, ತಕ್ಷಣವೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ವಿಚಾರಣೆಗೆ ಸಹಕಾರ ನೀಡುವುದನ್ನು ಬಿಟ್ಟು ಬಂಡತನದಿಂದ ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನ ಮಾಡುತ್ತಿರುವುದು ಘೋರ ಅಪರಾಧವಾಗಿದೆ ಎಂದು ಆರೋಪಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಆದೇಶ ನೀಡಿದ ಕೂಡಲೇಸಿದ್ದರಾಮಯ್ಯ ಅವರು ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ತಮ್ಮ ವಿಷಯದಲ್ಲಿ ಅದನ್ನು ಗಾಳಿಗೆ ತೂರಿ ಮೊಂಡತನ ತೋರಿಸುತ್ತಿದ್ದಾರೆ. ನಾಲ್ಕು ದಶಕಗಳ ಕಾಲ ಶಾಸಕರಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಹಲವಾರು ಹುದ್ದೆಗಳನ್ನು ಅನುಭವಿಸಿ ಹಿರಿಯರಾಗಿ ತಾವೇ ಬುದ್ಧಿವಾದ ಹೇಳುವ ಎಲ್ಲ ಮಾತುಗಳನ್ನು ಈಗ ಪರಿಪಾಲನೆ ಮಾಡುತ್ತಿಲ್ಲ. ರಾಜ್ಯದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡದೇ ಕೂಡಲೇ ಅರಾಜಕತೆಯನ್ನುಂಟು ಮಾಡಲಾಗಿದೆ. ದೊಡ್ಡ ಷಡ್ಯಂತ್ರ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ, ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಮಾರುತಿ ಅಷ್ಟಗಿ ಮತ್ತಿತರರು ಇದ್ದರು.