ರಾಜಣ್ಣ ಉಸ್ತುವಾರಿ ಸಚಿವರೋ ಅಥವಾ ಅತಿಥಿಯೋ

| Published : Aug 02 2024, 12:58 AM IST

ಸಾರಾಂಶ

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದಲ್ಲಿ ಶೇ.60 ಕಾಫಿ ಬೆಳೆ ಅತಿಯಾದ ಮಳೆಗೆ ಕೊಳೆತು ಹಾಳಾಗಿದೆ. ಕಾಳು ಮೆಣಸಿನ ಕತೆಯೂ ಇದೆ. ಆಗಿದೆ. ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತ ಸಂಭವಿಸಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹತ್ತಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೂರಾರು ಎಕರೆ ಬೆಳೆ ಇದ್ದ ಪ್ರದೇಶ ಹುಚ್ಚು ಮಳೆಗೆ ಕೊಚ್ಚಿ ಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿದ್ದರೂ ಉಸ್ತುವಾರಿ ಸಚಿವರಾದ ರಾಜಣ್ಣ ಸಚಿವರು ಜಿಲ್ಲೆಗೆ ಬರುತ್ತಿಲ್ಲ ಏಕೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ನಿಜವಾಗಿಯೂ ಉಸ್ತುವಾರಿ ಸಚಿವರೋ ಅಥವಾ ಅಪರೂಪಕ್ಕೊಮ್ಮೆ ಜಿಲ್ಲೆಗೆ ಬಂದು ಹೋಗುವ ಅತಿಥಿಯೋ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದಲ್ಲಿ ಶೇ.60 ಕಾಫಿ ಬೆಳೆ ಅತಿಯಾದ ಮಳೆಗೆ ಕೊಳೆತು ಹಾಳಾಗಿದೆ. ಕಾಳು ಮೆಣಸಿನ ಕತೆಯೂ ಇದೆ. ಆಗಿದೆ. ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತ ಸಂಭವಿಸಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹತ್ತಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೂರಾರು ಎಕರೆ ಬೆಳೆ ಇದ್ದ ಪ್ರದೇಶ ಹುಚ್ಚು ಮಳೆಗೆ ಕೊಚ್ಚಿ ಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿದ್ದರೂ ಸಚಿವರು ಜಿಲ್ಲೆಗೆ ಬರುತ್ತಿಲ್ಲ ಏಕೆ ಎಂದು ಕೇಳಿದ್ದಾರೆ.

ಇಂಥಾ ಸನ್ನಿವೇಶದಲ್ಲಿ ಸಚಿವರು ಇಲ್ಲೇ ಮೊಕ್ಕಾಂ ಹೂಡಿ ಅಧಿಕಾರಿಗಳ ಸಭೆ ನಡೆಸಿ, ಅವರಿಗೆ ಮಾರ್ಗದರ್ಶನ ನೀಡಿ, ತಾವೂ ಕೂಡ ಜಿಲ್ಲೆಯ ಸಕಲೇಶಪುರ ಹಾಗೂ ಇತರೆ ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟ ಬೇಕಿತ್ತು. ಆದರೆ ಅದ್ಯಾವುದನ್ನು ಮಾಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಇನ್ನಾದರೂ ಜಿಲ್ಲೆಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೋವು-ನಲಿವಿಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಕೃಷಿ ಬೆಳೆ ನಾಶವಾಗಿದ್ದರೂ, ಕೃಷಿ ಸಚಿವರು, ಹಾಸನಕ್ಕೂ ನನಗೂ ಸಂಬಂಧವೇ ಇಲ್ಲ ಎಂಬಂತೆ ಇರುವುದು ದುರದೃಷ್ಟಕರ. ಇನ್ನೊಂದೆಡೆ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದರೂ, ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯಾದರೂ ಹಾನಿಯಾಗಿರುವ ಕಡೆಗಳಿಗೆ ಭೇಟಿ ನೀಡಲು ಸಭೆ ನಡೆಸಿ ರಾಜಕೀಯ ಮಾಡಲು ಬಂದು ಹೋಗಿದ್ದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ್ದಾರೆ. ಸಣ್ಣ ಪುಟ್ಟದ್ದಕ್ಕೂ ಕೇಂದ್ರ ಸರ್ಕಾರವನ್ನು ದೂರುವ ಜಿಲ್ಲೆ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು, ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದರೂ, ಜನರ ಸಂಕಷ್ಟಕ್ಕೆ ಸ್ಪಂದಿಸದೆ ಕೇವಲ ರಾಜಕೀಯ ಮಾಡುತ್ತಿದ್ದಾರೆ. ಭರ್ತಿಯಾಗಿರುವ ಕಾವೇರಿ, ಕಬಿನಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಹಾಸನದ ಹೇಮಾವತಿಗೆ ಬಾಗಿನ ಅರ್ಪಿಸದೆ ಅವಮಾನ ಮಾಡಿದ್ದಾರೆ ಎಂದು ಅವರು ಖಂಡಿಸಿದ್ದಾರೆ.