ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

| Published : Jun 30 2025, 12:34 AM IST

ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ನೋಂದಣಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೊಸದಾಗಿ ಸದಸ್ಯರನ್ನು ನೋಂದಣಿ ಮಾಡಿಕೊಂಡು ಜೆಡಿಎಸ್‌ಗೆ ಹೊಸ ಶಕ್ತಿ ನೀಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲು ಭಾನುವಾರ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದ ಪಕ್ಷದ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.

ಜಿಲ್ಲೆಯ ಗಡಿಭಾಗದ ನಿಡಘಟ್ಟ ಬಳಿಗೆ ಬೆಳಗ್ಗೆ 10 ಗಂಟೆಗೆ ಆಗಮಿಸಿದ ನಿಖಿಲ್‌ಗೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಡಾ.ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಅಸಂಖ್ಯಾತ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು.

ನಂತರ ರುದ್ರಾಕ್ಷಿ ಪುರ, ಸೋಮನಹಳ್ಳಿ ಹಾಗೂ ಕೆಸ್ತೂರು ಕ್ರಾಸ್ ಬಳಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಮುಖಂಡ ಕೆ.ಟಿ.ರಾಜಣ್ಣ ಒಳಗೊಂಡಂತೆ ಆತಗೂರು ಹೋಬಳಿಯ ಕಾರ್ಯಕರ್ತರು ನಿಖಿಲ್‌ಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ನಂತರ ಕಾರ್ಯಕರ್ತರು ಯುವ ಮೋರ್ಚಾ ಅಧ್ಯಕ್ಷ ನಿಖಿಲ್, ಮಾಜಿ ಸಚಿವ ತಮ್ಮಣ್ಣ ಅವರನ್ನು ಬೈಕ್ ರ‍್ಯಾಲಿ ಮೂಲಕ ಶಿವಪುರ, ಮದ್ದೂರಿನ ಪೇಟೆ ಬೀದಿ ಮೂಲಕ ಮೆರವಣಿಗೆಯಲ್ಲಿ ಕರೆತಂದರು. ಬಳಿಕ ಸಂಜಯ ಚಿತ್ರಮಂದಿರದ ಬಳಿಯಿಂದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದ ವರೆಗೆ ಜಾನಪದ ಕಲಾತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು.

ಪ್ರವಾಸಿ ಮಂದಿರದ ಬಳಿ ಪುರಸಭಾ ಸದಸ್ಯೆ ಪ್ರಿಯಾಂಕ, ಜೆಡಿಎಸ್ ಮುಖಂಡ ಅಪ್ಪು ಪಿ.ಗೌಡ ಸೇರಿದಂತೆ ಅನೇಕ ಮುಖಂಡರು ಪಟಾಕಿ ಸಿಡಿಸಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷದ ಮುಖಂಡರಿಗೆ ಜೆಸಿಪಿ ಸಹಾಯದಿಂದ ಹೂ ಮಳೆಗೆರೆದರಲ್ಲದೇ, ಭಾರೀ ಗಾತ್ರದ ಅನಾನಸ್ ಹಣ್ಣಿನ ಹಾರ ಹಾಕಿ ಭವ್ಯ ಸ್ವಾಗತ ನೀಡಿದರು.

ಈ ವೇಳೆ ಮಾತನಾಡಿದ ಜೆಡಿಎಸ್ ಯುವ ಮೋರ್ಚಾ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ನೋಂದಣಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೊಸದಾಗಿ ಸದಸ್ಯರನ್ನು ನೋಂದಣಿ ಮಾಡಿಕೊಂಡು ಜೆಡಿಎಸ್‌ಗೆ ಹೊಸ ಶಕ್ತಿ ನೀಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರ ಶೆಟ್ಟಿ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಹೊನ್ನೇಗೌಡ, ಮುಖಂಡರಾದ ಡಿ.ಟಿ.ಸಂತೋಷ್, ಪುರಸಭಾ ಸದಸ್ಯ ಎಂ.ಐ.ಪ್ರವೀಣ್, ಮುಖಂಡರಾದ ಆಲ ಭೂಜನಹಳ್ಳಿ ಚಂದ್ರಣ್ಣ, ವೆಂಕಟೇಶ್, ಗುರುದೇವರಹಳ್ಳಿ ಅರವಿಂದ, ನಗರಕೆರೆ ಸಂದೀಪ, ಆಬಲವಾಡಿ ಸುರೇಶ ಸೇರಿದಂತೆ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.