ಪ್ರತಿಯೊಬ್ಬರೂ ಅಂಬೇಡ್ಕರ್ ಮೌಲ್ಯ ಅಳವಡಿಸಿಕೊಳ್ಳಬೇಕು

| Published : Apr 17 2024, 01:21 AM IST

ಪ್ರತಿಯೊಬ್ಬರೂ ಅಂಬೇಡ್ಕರ್ ಮೌಲ್ಯ ಅಳವಡಿಸಿಕೊಳ್ಳಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಅಂಬೇಡ್ಕರ್ ಸ್ಮರಣೆ ಕೇವಲ ಏ. 14ಕ್ಕೆ ಸೀಮಿತವಾದರೆ ಸಾಲದು. ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಅವರ ಜಯಂತಿ ಆಚರಣೆಯು ಸಾರ್ಥಕತೆ ಕಾಣುತ್ತದೆ. ಈ ದೇಶದಲ್ಲಿ ಸಂವಿಧಾನದ ಮೂಲ ಆಶಯಗಳು ಸಂಪೂರ್ಣವಾಗಿ ಜಾರಿಯಾಗಿಲ್ಲ.‌ಅಂಬೇಡ್ಕರ್ ಕಂಡ ಕನಸುಗಳು ನನಸಾಗಬೇಕಾದಲ್ಲಿ ಸಂವಿಧಾನದ ಆಶಯಗಳು ಸಂಪೂರ್ಣ ಅನುಷ್ಠಾನಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಟಿ. ನರಸೀಪುರ

ಅಂಬೇಡ್ಕರ್ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ಮತ್ತು ಜಿಲ್ಲಾ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತಾಯೂರು ಪ್ರಕಾಶ್ ಸಲಹೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ದಸಂಸ ವತಿಯಿಂದ ಆಯೋಜಿಸಿದ್ದ ಡಾ. ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಸ್ಮರಣೆ ಕೇವಲ ಏ. 14ಕ್ಕೆ ಸೀಮಿತವಾದರೆ ಸಾಲದು. ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಅವರ ಜಯಂತಿ ಆಚರಣೆಯು ಸಾರ್ಥಕತೆ ಕಾಣುತ್ತದೆ. ಈ ದೇಶದಲ್ಲಿ ಸಂವಿಧಾನದ ಮೂಲ ಆಶಯಗಳು ಸಂಪೂರ್ಣವಾಗಿ ಜಾರಿಯಾಗಿಲ್ಲ.‌ಅಂಬೇಡ್ಕರ್ ಕಂಡ ಕನಸುಗಳು ನನಸಾಗಬೇಕಾದಲ್ಲಿ ಸಂವಿಧಾನದ ಆಶಯಗಳು ಸಂಪೂರ್ಣ ಅನುಷ್ಠಾನಗೊಳ್ಳಬೇಕು ಎಂದರು.

ವಿಚಾರವಾದಿ ಪ್ರಭುಸ್ವಾಮಿ, ಕದಸಂಸ ಜಿಲ್ಲಾ ಸಂಚಾಲಕ ರಾಜಶೇಖರ್ ಮೂರ್ತಿ ಮಾತನಾಡಿದರು.

ಚಾಮರಾಜನಗರ ಜಿಲ್ಲಾ ಸಂಚಾಲಕ ಬೆಳ್ಳಿಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಂಗು ನಾಯಕ್, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ ನಾಯಕ್, ಶಿವಕುಮಾರ್, ಸಂತೋಷ್, ರವಿ ಇದ್ದರು.