ಸಾರಾಂಶ
ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ಒತ್ತಾಯಿಸಿ ವಿರಾಜಪೇಟೆ ಜೆ ಡಿ ಎಸ್ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಚಾಮಿಯಲ್ ಅವರ ನೇತೃತ್ವದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್‌ಗೆ ಮನವಿ ಸಲ್ಲಿಸಲಾಯಿತು.ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿಯ ನಿವಾಸಿಗಳಿಗೆ ದೂರ ಪ್ರದೇಶಗಳಾದ ಮಂಗಳೂರು, ಮೈಸೂರು ಬೆಂಗಳೂರು ಕಡೆಗಳಿಗೆ ತೆರಳಿ ಪಾಸ್‌ಪೋರ್ಟ್ ಮಾಡಲು ತೊಂದರೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸೇವಾ ಕೇಂದ್ರ ಸ್ಥಾಪನೆಯಾದಲ್ಲಿ ಅದು ಜಿಲ್ಲೆಯ ಜನತೆಗೆ ಅನುಕೂಲವಾಗುವುದಾಗಿ ಅವರು ಒತ್ತಾಯಿಸಿದರು. ಮನವಿಗೆ ಪ್ರತಿಕ್ರಿಯಿಸಿದ ಸಂಸದರು ಸಂಬಂಧಪಟ್ಟ ಇಲಾಖೆಗೆ ಶೀಘ್ರವೇ ಮಾತನಾಡುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದರು.ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಶಿಯಾಬುದ್ದಿನ್ ಇದ್ದರು.