ಸಾರಾಂಶ
ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25ವರ್ಷ ತುಂಬಿದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25ವರ್ಷ ತುಂಬಿದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದರು. ಇದೇ ವೇಳೆ ಮಾತನಾಡಿದ ಗ್ರಾಮದ ಜೆಡಿಎಸ್ ಮುಖಂಡ ಗೋವಿಂದರಾಜು, ಮಾಜಿ ಪ್ರಧಾನಿಗಳಾದ ಎಚ್. ಡಿ. ದೇವೇಗೌಡರು ಕಟ್ಟಿದಂತ ಜೆಡಿಎಸ್ ಪಕ್ಷ ಇಡೀ ರಾಜ್ಯದಲ್ಲಿ ಸುಭದ್ರವಾಗಿ ಸುಭಿಕ್ಷವಾಗಿದೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿರುವುದು ಇದೆ ಮೊದಲು. ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸಧೃಡವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇಡೀ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಇಲ್ಲಿಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಆಚರಣೆ ಮಾಡುತ್ತಿದ್ದೇವೆ . ಕುಮಾರಸ್ವಾಮಿಯವರು ಮುಖ್ಯಮಂತ್ರಿ ಯಾಗಿ ರೈತರ ಪರ ಕೆಲಸಗಳನ್ನು ಮಾಡಿ ಅನೇಕ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬೆಂಬಲಿಸಬೇಕು ಎಂದರು.ಮುಂಬರುವ ಚುನಾವಣೆಯಲ್ಲಿ ಎನ್.ಡಿ.ಎ. ದಿಂದ ಗುಬ್ಬಿಯಲ್ಲಿ ಬಿ.ಎಸ್. ನಾಗರಾಜು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ ಎಸ್ ನಾಗರಾಜ್ ಅವರು 45 ಸಾವಿರ ಮತಗಳನ್ನು ಪಡೆದು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಿರುವುದರಿಂದ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಬಿ ಎಸ್ ನಾಗರಾಜು ಅವರು 90 ಸಾವಿರ ಮತಗಳ ಅಂತರದಿಂದ ಗೆಲುವು ಪಡೆದು ಗುಬ್ಬಿ ಶಾಸಕರಾಗಿ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜೆಡಿಎಸ್ ಮುಖಂಡ ಆನಂದ್ ಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸಧೃಡವಾಗಿದೆ.ಮುಂಬರುವ 2028ರ ಚುನಾವಣೆಯಲ್ಲಿ ರಾಜ್ಯದ ಸಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.ಜೆಡಿಎಸ್ ಕಾರ್ಯಕರ್ತರು ಹೆಚ್ಚಿನದಾಗಿ ಗುಬ್ಬಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಗುಬ್ಬಿ ಜೆಡಿಎಸ್ ಭದ್ರಕೋಟೆ ಎಂಬುದನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಬೀತು ಮಾಡಿದ್ದೇವೆ. ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಾಸಕರು ಜೆಡಿಎಸ್ ಪಕ್ಷದಿಂದ ಗೆಲುವುದನ್ನು ನಾವೆಲ್ಲರೂ ಕಾಣುತ್ತೇವೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಿಯೋತ್ಸವ ಆಚರಿಸಿದರು. ಇದೇ ಸಂಧರ್ಭದಲ್ಲಿ ಜೆಡಿಎಸ್ ಮುಖಂಡರಾದ ರಾಮಯ್ಯ , ಕರೇಗಿರಿಯಪ್ಪ , ಶಾಂತಪ್ಪ , ಲಕ್ಷ್ಮಯ್ಯ , ಶಿವಣ್ಣ , ಆನಂದ್ ಕುಮಾರ್ ,ಅಜಯ್ ,ಕರಿಬಸವಯ್ಯ ,ಭರತ್ ,ಚಂದನ್ ,ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))