ಸಾರಾಂಶ
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪರ ನುಗ್ಗೇಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿಯ 5ನೇ ವಾರ್ಡ್‌ನ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಜಿಎನ್ ಕೊಪ್ಪಲಲ್ಲಿ ಪ್ರಚಾರ । ಮೋದಿಗಾಗಿ ಎನ್‌ಡಿಎ ಅಭ್ಯಥಿಗೆ ಮತ ನೀಡಿ
ನುಗ್ಗೇಹಳ್ಳಿ: ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪರ ಗ್ರಾಮದ ಗ್ರಾಮ ಪಂಚಾಯಿತಿಯ 5ನೇ ವಾರ್ಡ್‌ನ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.ಗ್ರಾಮದ ತಿಪಟೂರು ಮುಖ್ಯರಸ್ತೆಯಲ್ಲಿ ಬರುವ 5ನೇ ವಾರ್ಡ್ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡುವಂತೆ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ತೋಟಿ ನಾಗರಾಜ್, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ಸಂಸದರ 5 ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ತಂದಿದ್ದಾರೆ. ತಾಲೂಕಿನ ಅನೇಕ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮತ್ತು ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದು ಮುಂಬರುವ ದಿನಗಳಲ್ಲಿ ಹೋಬಳಿ ಕೇಂದ್ರದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರದ ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಮನ್ನಣೆ ನೀಡಿ ಮತದಾರರು ಎನ್‌ಡಿಎ ಅಭ್ಯರ್ಥಿಯನ್ನು ಆಶೀರ್ವದಿಸುವಂತೆ ಮನವಿ ಮಾಡಿದರು. ಮತ್ತೊಮ್ಮೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ರಚನೆಯಾಗಲು ಪ್ರಜ್ವಲ್‌ಗೆ ಮತಹಾಕಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ಶಿವಕುಮಾರ್, ಎನ್.ಎಸ್.ಮಂಜುನಾಥ್, ನಟರಾಜ ಯಾದವ್, ವಿಠಲ್ ಕುಮಾರ್, ಹೊನ್ನೇಗೌಡ, ಮುಖಂಡರಾದ ಜಗದೀಶ್, ಅಕ್ಕು(ಸಾಧಿಕ್ ಪಾಷ), ಪೋಲಿಸ್ ಬೆಟ್ಟಯ್ಯ, ಶಂಕರ್, ಎನ್.ಆರ್.ಚಂದ್ರು, ಯಲ್ಲಪ್ಪ, ಡೈರಿ ನಾಗೇಶ್, ಪಟೇಲ್ ಕುಮಾರಸ್ವಾಮಿ, ಮುರಳಿ, ರಾಜು, ನಾರಾಯಣಗೌಡ, ಶಿವ ಸ್ವಾಮಿ, ರುದ್ರಸ್ವಾಮಿ, ಎನ್.ಎಸ್.ಗಿರೀಶ್, ಜೈ ಕೀರ್ತಿ, ಹೂವಿನಹಳ್ಳಿ ರಮೇಶ್ ಹಾಜರಿದ್ದರು.
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪರ ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡ್‌ನ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚಿಸಿದರು.