ನಾಳೆ ಮಡಿಕೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

| Published : Mar 29 2024, 12:53 AM IST

ಸಾರಾಂಶ

ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ಪರಿಣಾಮ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ವರಿಷ್ಠರು ಸೂಚನೆ ನೀಡಿದ್ದಾರೆ. ಅಂತೆಯೇ, ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಸಜ್ಜಾಗಿದ್ದೇವೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈ ಬಾರಿ ವರಿಷ್ಠರ ಸೂಚನೆ ಮೇರೆಗೆ ಅಭ್ಯರ್ಥಿ ಯದುವೀರ್‌ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿಯೊಂದಿಗೆ ಜಂಟಿಯಾಗಿ ಕೆಲಸ ಮಾಡಲು ಪಕ್ಷದ ವರಿಷ್ಠರು ಆದೇಶ ನೀಡಿರುವ ಹಿನ್ನೆಲೆ ಮಾ.೩೦ರಂದು ನಗರದ ಖಾಸಗಿ ಹೋಟೇಲ್ ವ್ಯಾಲಿವ್ಯೂವ್‌ನಲ್ಲಿ ಮುಂಚೂಣಿ ನಾಯಕರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧ ಗಂಟೆಗೆ ನಡೆಯುವ ಸಭೆಗೆ ಮಾಜಿ ಸಚಿವ ಸಾ.ರ.ಮಹೇಶ್ ಹಾಗೂ ಉಸ್ತುವಾರಿ ಮಂಜೇಗೌಡ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್ ಕೋರ್ ಕಮಿಟಿ ರಚನೆ ಮಾಡಲಾಗುವುದು. ಸಭೆಗೆ ಜೆಡಿಎಸ್ ತಾಲೂಕು ಅಧ್ಯಕ್ಷರು, ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ಪರಿಣಾಮ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ವರಿಷ್ಠರು ಸೂಚನೆ ನೀಡಿದ್ದಾರೆ. ಅಂತೆಯೇ, ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಸಜ್ಜಾಗಿದ್ದೇವೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈ ಬಾರಿ ವರಿಷ್ಠರ ಸೂಚನೆ ಮೇರೆಗೆ ಅಭ್ಯರ್ಥಿ ಯದುವೀರ್‌ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.ಜೆಡಿಎಸ್‌ಗೆ ಜಿಲ್ಲಾಧ್ಯಕ್ಷರ ನೇಮಕವಾಗಿಲ್ಲ. ಕೊಡಗು ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರನ್ನು ಅದೇ ಹುದ್ದೆಗಳಲ್ಲಿ ಮುಂದುವರಿಸಿಕೊಂಡು ಹೋಗಲು ಎಚ್.ಡಿ.ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಅದರಂತೆ ಆಯಾಯಾ ತಾಲೂಕು ಅಧ್ಯಕ್ಷರೇ ಜವಾಬ್ದಾರಿ ವಹಿಸಲಾಗುತ್ತಿದೆ ಎಂದರು.ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್ ಮಾತನಾಡಿ, ಬಿಜೆಪಿಗಿಂತ ಮೋದಿಯ ವರ್ಚಸ್ಸು ಇಂದು ನಡೆಯುತ್ತಿದೆ. ಇದರೊಂದಿಗೆ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದು, ಯದುವೀರ್ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದರು.ಕುಶಾಲನಗರ ತಾಲೂಕು ಅಧ್ಯಕ್ಷ ಪಿ.ಡಿ.ರವಿ, ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಿ.ಎಸ್.ನಾಗರಾಜ್, ಮಡಿಕೇರಿ ತಾಲೂಕು ಅಧ್ಯಕ್ಷ ಜಾಸಿರ್ ಸುದ್ದಿಗೋಷ್ಠಿಯಲ್ಲಿದ್ದರು.