ಸಾರಾಂಶ
ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 3ರಂದು ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ ತಿಳಿಸಿದರು.
ಬೀದರ್: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 3ರಂದು ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ ತಿಳಿಸಿದರು.
ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಗೆ ಸಂಬಂಧಿಸಿದಂತೆ ಬೀದರ್ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜುಲೈ 3 ರಂದು ಬೆಳಗ್ಗೆ 11:30ಕ್ಕೆ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಲಾವಣ್ಯ ಫಂಕ್ಷನ್ ಹಾಲ್ ನಲ್ಲಿ ಹಾಗೂ ಸಂಜೆ 4 ಗಂಟೆಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿ ಹೊರವಲಯದಲ್ಲಿರುವ (ಮೀನಕೇರಾ ಕ್ರಾಸ್) ವಿಜಯಲಕ್ಷ್ಮೀ ಫಂಕ್ಷನ್ ಹಾಲ್ ನಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಯುತ್ತದೆ.ಅಂದು ನಡೆಯುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಸೇರಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಪಕ್ಷದ ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ಶ್ರಮಿಸಿಬೇಕೆಂದು ರಮೇಶ ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡಗೆ, ಜಿಲ್ಲಾ ಚುನಾವಣಾ ಅಧಿಕಾರಿ ಶಿವಪುತ್ರ ಮಾಳಗೆ, ಪ್ರಮುಖರಾದ ಐಲಿನ್ ಜಾನ್ ಮಠಪತಿ, ರಾಜಶೇಖರ್ ಜವಳೆ, ಸಿದ್ರಾಮಪ್ಪ ವಂಕ್ಕೆ, ಶಿವರಾಜ್ ಹುಲಿ, ಸುರೇಶ್ ಸಿಗಿ, ಬಸವರಾಜ್ ಪಾಟೀಲ್ ಹಾರೂರಗೇರಿ, ಸಂಜುರೆಡ್ಡಿ ನಿರ್ಣಾ, ಅಭಿ ಕಾಳೆ, ಸಂಗು ಚಿದ್ರಿ, ರಾಜು ಚಿಂತಾಮಣಿ, ಮಹಮ್ಮದ್ ಮುಜಿಬುದ್ದೀನ್ ಮನೋಹರ್ ದಂಡಿನ, ಬೊಮಗೊಂಡ ಚಿಟ್ಟಾವಾಡಿ, ಪ್ರಶಾಂತ್ ವಿಶ್ವಕರ್ಮ ಸೇರಿದಂತೆ ಇನ್ನಿತರರು ಇದ್ದರು.