ಇಲ್ಲಿನ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ -2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ

ಮೂಡುಬಿದಿರೆ: ಇಲ್ಲಿನ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ -2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳಾದ ಧನುಷ್ ಗುತ್ತಿ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 95ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಆದಿತ್ಯ ಅನಿಲ್ ಕೆಂಚಣ್ಣನವರ್ 1803 ರ‍್ಯಾಂಕ್ , ಪ್ರಕೃತಿ ಶ್ರೀಧರ್ 1814 ರ‍್ಯಾಂಕ್ (ಕೆಟಗರಿ), ಗೌತಮ್ ಎ.ಎನ್. 3125 ರ್‍ಯಾಂಕ್ (ಕೆಟಗರಿ), ಸಮ್ಮಿತ್ ಎಚ್.ಎಸ್. 4372 ರ‍್ಯಾಂಕ್ ಹಾಗೂ ಜೆಂಕರ್ ಎಂ. 22318 ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿನ ಸಾಧನಾ ಪಥಕ್ಕೆ ಮತ್ತೊಂದು ಗರಿ ಮೂಡಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ಜೆಇಇ ಹಾಗೂ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿದೆ. ಜೆಇಇ ಅಡ್ವಾನ್ಸ್ಡ್-2026ರ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಸಾಕ್ಷಿಯಾಗಿದೆ