ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಪಡೆಯಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್–1) 2026ರ ಫಲಿತಾಂಶ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ತೋರಿದ್ದಾರೆ.

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಪಡೆಯಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್–1) 2026ರ ಫಲಿತಾಂಶ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ತೋರಿದ್ದಾರೆ.ಒಟ್ಟು 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕಗಳನ್ನು ಗಳಿಸಿ ಮುಂದಿನ ಹಂತವಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. 99 ಪರ್ಸೆಂಟೈಲ್ ಗಿಂತ ಅಧಿಕ ಅಂಕಗಳನ್ನು ಮೂವರು ವಿದ್ಯಾರ್ಥಿಗಳು ಪಡೆದಿದ್ದು, 98 ಪರ್ಸೆಂಟೈಲ್ ಗಿಂತ ಅಧಿಕ ಅಂಕಗಳನ್ನು 14 ಮಂದಿ, 95 ಪರ್ಸೆಂಟೈಲ್ ಗಿಂತ ಅಧಿಕ ಅಂಕಗಳನ್ನು 45 ಮಂದಿ ಹಾಗೂ 90 ಪರ್ಸೆಂಟೈಲ್ ಗಿಂತ ಅಧಿಕ ಅಂಕಗಳನ್ನು ಒಟ್ಟು 102 ಮಂದಿ ವಿದ್ಯಾರ್ಥಿಗಳು ಗಳಿಸಿದ್ದಾರೆ.

ನಮಿತ್ ಕೃಷ್ಣಮೂರ್ತಿ ಹೆಗಡೆ 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. 99.3310617 ಪರ್ಸೆಂಟೈಲ್ ಮತ್ತು ಪ್ರಥಮ್ ತಮ್ಮಣ್ಣ ಗೌಡರ್ 99.1416986 ಪರ್ಸೆಂಟೈಲ್ ಪಡೆದು ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದಾರೆ. ತೇಜಸ್ ಆರ್. ಬಿ. 98.9615457, ನಿನಾದ್ ರಾಜೇಶ್ ನಾಯ್ಕ್ 98.9463580, ಧನುಷ್ ಹೆಚ್. ಎ. 98.5706065, ಸಂವಿತ್ ಅಮಿತ್ ಗೋಕರ್ಣ 98.5706065, ದೃಶ್ಯ್ 98.4130581, ಸುಕ್ಷಿತ್ ಗಿರೀಶ್ ಗೌಡ 98.3503880, ತೇಜಸ್ ಎನ್. ಇ. 98.3227894, ತೇಜಸ್ ಹೆಗಡೆ ಎಚ್. ಡಿ. 98.1925416, ಅಕ್ಷತಾ ಮೋಹನ್ ಹೆಗಡೆ 98.1682710, ಪ್ರಜ್ವಲ್ ಭಟ್ 98.0498968 ಹಾಗೂ ವಿಶ್ವೇಶ್ ಎನ್. ಎಚ್. 98.0348799 ಪರ್ಸೆಂಟೈಲ್ ಗಳಿಸಿ ಸಾಧನೆ ಮಾಡಿದ್ದಾರೆ.ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಇಇ ಪರೀಕ್ಷೆಯ ಸಂಯೋಜಕರಾದ ನಂದೀಶ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಶುಭಾಶಯ ಕೋರಿದ್ದಾರೆ.