ಶ್ರವಣಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ, ಅರುವನಹಳ್ಳಿ ಗ್ರಾಮದ ಎ. ಆರ್. ಜೀವನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಪುಟ್ಟಸ್ವಾಮಿಗೌಡ ಮಾತನಾಡಿ, ಸಹಕಾರ ಕ್ಷೇತ್ರದ ಬೆಳವಣಿಗೆಗೆ ನಿರ್ದೇಶಕರು ಮತ್ತು ಅಧಿಕಾರಿಗಳ ನಡುವಿನ ಹೊಂದಾಣಿಕೆ ಮುಖ್ಯ ಎಂದರು. ನೂತನ ಅಧ್ಯಕ್ಷ ಎ.ಆರ್. ಜೀವನ್ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಿ, ಇನ್ನಷ್ಟು ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಶ್ರವಣಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ, ಅರುವನಹಳ್ಳಿ ಗ್ರಾಮದ ಎ. ಆರ್. ಜೀವನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಎಸ್. ಕೆ. ಅಶೋಕ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜೀವನ್ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ವಿಜಯೇಂದ್ರ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು. ನೂತನ ಅಧ್ಯಕ್ಷರನ್ನು ಶಾಸಕ ಸಿ. ಎನ್. ಬಾಲಕೃಷ್ಣ ಅಭಿನಂದಿಸಿ ಮಾತನಾಡಿ, ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರ ಆರ್ಥಿಕ ಶಕ್ತಿಯಾಗಿವೆ. ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಕಲ್ಪಿಸುವುದರ ಜತೆಗೆ ಸಂಘದ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಸಂಘವನ್ನು ಮಾದರಿ ಸಹಕಾರ ಸಂಸ್ಥೆಯನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು. ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಪುಟ್ಟಸ್ವಾಮಿಗೌಡ ಮಾತನಾಡಿ, ಸಹಕಾರ ಕ್ಷೇತ್ರದ ಬೆಳವಣಿಗೆಗೆ ನಿರ್ದೇಶಕರು ಮತ್ತು ಅಧಿಕಾರಿಗಳ ನಡುವಿನ ಹೊಂದಾಣಿಕೆ ಮುಖ್ಯ ಎಂದರು. ನೂತನ ಅಧ್ಯಕ್ಷ ಎ.ಆರ್. ಜೀವನ್ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಿ, ಇನ್ನಷ್ಟು ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಸ್.ಕೆ.ಅಶೋಕ್, ಉಪಾಧ್ಯಕ್ಷೆ ಕಮಲಮ್ಮ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಚಿಕ್ಕಬಿಳ್ತಿ ಪ್ರವೀಣ್, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪಿ.ಕೆ.ಮಂಜೇಗೌಡ, ತಾಲೂಕು ಕುರುಬ ಸಂಘದ ಅಧ್ಯಕ್ಷ ರಮೇಶ್, ಗ್ರಾಮ ಪಂಚಾಯ್ತಿ ಸದಸ್ಯ ಎಸ್. ಟಿ. ಮಹೇಶ್, ಮುಖಂಡರಾದ ರಮೇಶ್, ರಾಮು, ಜಗದೀಶ್, ಶ್ರೀನಿವಾಸ್, ನಿರ್ದೇಶಕರಾದ ಶರತ್ ಕುಮಾರ್, ಶೋಭಾ, ಧರ್ಮರಾಜು, ಪುಟ್ಟರಾಜು, ಮಂಜೇಗೌಡ, ವೆಂಕಟೇಶ್, ನಾಗರಾಜು, ಪ್ರದೀಪ್, ಕುಮಾರ್, ಶೋಭಕೃ?ಗೌಡ, ನಾಗರಾಜನಾಯ್ಕ, ಎಂ.ವೆಂಕಟೇಶ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಮಧು, ಸಂಘದ ಕಾರ್ಯದರ್ಶಿ ಮಂಜೇಗೌಡ ಉಪಸ್ಥಿತರಿದ್ದರು.ಫೋಟೋ:ಶ್ರವಣಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಜೀವನ್ ಅವರನ್ನು ಶಾಸಕ ಬಾಲಕೃಷ್ಣ ಅಭಿನಂದಿಸಿದರು.