ಜೇವರ್ಗಿ: 1,59,899೧ ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ

| Published : Jun 07 2024, 12:15 AM IST

ಜೇವರ್ಗಿ: 1,59,899೧ ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ
Share this Article
  • FB
  • TW
  • Linkdin
  • Email

ಸಾರಾಂಶ

ಜೇವರ್ಗಿ ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ, 1 ಸಾವಿರ ಹೆಕ್ಟೇರ್, ಹೆಸರು, 1290 ಹೆಕ್ಟೇರ್, ಏಳ್ಳು, 230 ಹೆಕ್ಟೇರ್ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರ ಗುರಿ ಹೊಂದಲಾಗಿದೆ.

ಕನ್ನಡಪ್ರಭ ವಾರ್ತೆ ಜೇವರ್ಗಿ

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,59,899 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದ್ದು, 11.81 ಲಕ್ಷ ಟನ್ ಉತ್ಪಾದನಾ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.

ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ, 1 ಸಾವಿರ ಹೆಕ್ಟೇರ್, ಹೆಸರು, 1290 ಹೆಕ್ಟೇರ್, ಏಳ್ಳು, 230 ಹೆಕ್ಟೇರ್ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರ ಗುರಿ ಹೊಂದಲಾಗಿದೆ.

ಪ್ರಸಕ್ತ ಹಂಗಾಮಿನಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಒದಗಿಸಲು ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ ಮೆಕ್ಕೆಜೋಳ, ಮತ್ತು ಭತ್ತದ ಬೀಜಗಳನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದೆ. ರೈತರಿಗೆ ಬೀಜಗಳ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ.

ಬಿತ್ತನೆಗೆ ಬೇಕಾಗುವ ಬೀಜ, ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಕೃಷಿ ಪರಿಕರ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಬಿಲ್ಲುಗಳ ಸಮೇತ ಪಡೆದುಕೊಳ್ಳಬೇಕು.

ರೈತರು ಬಿತ್ತನೆಗೆ ಭೂಮಿ ಹದಗೊಳಿಸಿ ಬಿತ್ತನೆಗೆ ಮುನ್ನ ರೋಗ, ಮತ್ತು ಕೀಟಗಳ ಹತೋಟಿಗಾಗಿ ಬೀಜಗಳ ಬೀಜೋಪಚಾರ ಕೈಗೊಂಡು ಬಿತ್ತನೆ ಮಾಡಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.