ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌

| Published : Jun 01 2024, 12:46 AM IST

ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಕಾರ್ಕಳ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚೆನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ‘ಬಿ’ ರಿಪೋರ್ಟ್ ಸಲ್ಲಿಸಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು. ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನನುಕೂಲತೆ ಸೃಷ್ಟಿಸಿದವರನ್ನು ಬಂಧಿಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ ಎಂದರು.

ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲಿಬಾನ್‌ಗಿರಿ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.