ಜಲಜೀವನ ಮಿಷನ್ ಯೋಜನೆಯಡಿ ಸುಮಾರು 1.60 ಲಕ್ಷ ರು. ವೆಚ್ಚದಲ್ಲಿ ಮನೆ ಮನೆಗೆ ನಳಸಂಪರ್ಕ ಕಾಮಗಾರಿಗೆ ಗುದ್ದಲಿ ಪೂಜೆ

ಕನ್ನಡಪ್ರಭ ವಾರ್ತೆ ಗುಬ್ಬಿ

ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಸಮರ್ಪಕ ಯೋಜನೆಯಾಗಿದ್ದು ಈ ಯೋಜನೆಯಿಂದ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗಿದ್ದು ಈ ಯೋಜನೆಯಲ್ಲಿ ಕಳಪೆ ಕಾಮಗಾರಿ ಮಾಡುವಂತಹ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಎಚ್ಚರಿಕೆ ನೀಡಿದರು.ಗುಬ್ಬಿ ತಾಲೂಕು ಕಲ್ಲೂರು ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ವತಿಯಿಂದ ಜಲಜೀವನ ಮಿಷನ್ ಯೋಜನೆಯಡಿ ಸುಮಾರು 1.60 ಲಕ್ಷ ರು. ವೆಚ್ಚದಲ್ಲಿ ಮನೆ ಮನೆಗೆ ನಳಸಂಪರ್ಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರದ ಈ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟುಅನುಕೂಲವಾಗಿದ್ದು ಕಾಮಗಾರಿಯಲ್ಲಿ ಯಾವುದೇ ಲೋಪ ಬಾರದಂತೆ ಕಾಮಗಾರಿ ಸಂಪೂರ್ಣವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಕಾಮಗಾರಿ ಕಳಪೆ ಆಗಿರುವುದು ಕಂಡು ಬಂದರೆ ನಾನು ಸಹಿಸುವುದಿಲ್ಲ ಅಂತಹ ಗುತ್ತಿಗೆದಾರರ ವಿರುದ್ಧ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎ ಇ ಇ ನಾಗೇಂದ್ರಪ್ಪ. ಕಲ್ಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸುಶೀಲಾ ಸದಯ್ಯ. ಉಪಾಧ್ಯಕ್ಷರಾದ ಸುಮ ಶಿವಯ್ಯ. ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜು. ಮಾಯಣ್ಣ ಗೌಡ. ಮುಖಂಡ ರಾಜು. ರುದ್ರಪ್ರಕಾಶ್. ಶಿವು ನಾರನಹಳ್ಳಿ. ಕೃಷ್ಣೆಗೌಡ. ನಾಗರಾಜು. ಮಂಜುನಾಥ್. ನಾರಾಯಣಪ್ಪ. ಇತರರು ಮುಖಂಡರು ಹಾಜರಿದ್ದರು.