ಇಂದು ಬನ್ನಂಜೆ ಬಿಲ್ಲವ ಸಂಘದಲ್ಲಿ ಉದ್ಯೋಗ ಮೇಳ

| Published : Mar 04 2025, 12:32 AM IST

ಸಾರಾಂಶ

ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉಡುಪಿ ನಗರಸಭೆಗಳ ವತಿಯಿಂದ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಬನ್ನಂಜೆ ಬಿಲ್ಲವ ಸೇವಾ ಸಂಘಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ.4ರಂದು ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉಡುಪಿ ನಗರಸಭೆಗಳ ವತಿಯಿಂದ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಬನ್ನಂಜೆ ಬಿಲ್ಲವ ಸೇವಾ ಸಂಘಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ.4ರಂದು ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಬಗ್ಗೆ ಶನಿವಾರ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮತ್ತು ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಈ ಉದ್ಯೋಗ ಮೇಳದಲ್ಲಿ ಸುಮಾರು 56 ಕಂಪನಿಗಳು ಭಾಗವಹಿಸಲಿದ್ದು, ತಮಗೆ ಬೇಕಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿವೆ. ಸುಮಾರು 2000 ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದಾರೆ. ಶೇ.75ರಷ್ಟು ಮಂದಿಗೆ ಉದ್ಯೋಗ ಸಿಗುವ ನೀರೀಕ್ಷೆ ಇದೆ ಎಂದರು.

ಈಗಾಗಲೇ ಯಾವುದೇ ಪದವಿ ಪಡೆದವರು ಅಥವಾ ಪ್ರಸ್ತುತ ಅಂತಿಮ ವರ್ಷದಲ್ಲಿರುವವರು ಈ ಮೇಳದಲ್ಲಿ ಆನ್‌ಲೈನ್ ಮೂಲಕ ಅಥವಾ ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಬಹುದು. ಆಸಕ್ತರು ತಮ್ಮ ವೈಯಕ್ತಿಕ ವಿವರ (ಬಯೋಡಾಟ), ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್, ಪಾನ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌, ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ, ಭಾವಚಿತ್ರಗಳ ತಲಾ 5 ಪ್ರತಿಗಳೊಂದಿಗೆ ಭಾಗವಹಿಸಬೇಕು ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.