ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರೀ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ವಿದ್ಯಾರ್ಥಿಗಳು ಉದ್ಯೋಗ ಸಂದರ್ಶನಗಳಿಗೆ ಸರಿಯಾದ ತಯಾರಿ ನಡೆಸಬೇಕು. ಪ್ರಮುಖವಾಗಿ ಮಾತುಗಳನ್ನು ಆಲಿಸುವ ಹಾಗೂ ಸಂವಹನ ಸಾಮರ್ಥ್ಯವನ್ನು ಹೊಂದಿರಬೇಕು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕೌಶಲ್ಯ, ಪ್ರೋಬ್ಲಮ್ ಸಾಲ್ವಿಂಗ್, ಟೀಮ್ ವರ್ಕ್, ಹೊಂದಿಕೊಳ್ಳುವಿಕೆ ಮತ್ತು ಉತ್ತಮ ಮನೋಭಾವ ಮೊದಲಾದ ಕೌಶಲ್ಯಗಳು ಉತ್ತಮ ಉದ್ಯೋಗ ಮತ್ತು ಯಶಸ್ವಿ ವೃತ್ತಿ ಜೀವನಕ್ಕೆ ಸಹಾಯಕವಾಗುತ್ತವೆ ಎಂದು ಭಾರತೀಯ ರಾಸಾಯನಿಕ ಮಂಡಳಿ (ಐಸಿಸಿ)ಯ ರೆಸ್ಪಾಂಸಿಬಲ್ ಕೇರ್‌ನ ಲೆಕ್ಕಪರಿಶೋಧಕ ರಾಜಶೇಖರ ಭಟ್ ಹೇಳಿದರು.ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ
ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರೀ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿ, ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಸೈದ್ಧಾಂತಿಕ
ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿಅನ್ವಯಿಸುವ ಜೊತೆಗೆ, ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸುವುದು ಇಂತಹ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ. ಉಪಸ್ಥಿತರಿದ್ದರು.ಉಪನ್ಯಾಸಕಿ ಡಾ. ನಿವೇದಿತಾ ಎನ್.ಬಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ದಿವ್ಯ ವಂದಿಸಿದರು. ಅವನಿ ಕೆ. ನಿರೂಪಿಸಿದರು.