ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ

| Published : Nov 27 2024, 01:01 AM IST

ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ
Share this Article
  • FB
  • TW
  • Linkdin
  • Email

ಸಾರಾಂಶ

ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.

ರಟ್ಟೀಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾವೇರಿ ತಾಲೂಕು ಪಂಚಾಯತ್ ರಟ್ಟೀಹಳ್ಳಿ ಇವರ ಸಹಯೋಗದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತಿಯಡಿ ಖಾತ್ರಿಯಾಗಿ 100 ದಿನ ಕೆಲಸ ನೀಡಲಾಗುತ್ತಿದೆ. ಆ ಮೂಲಕ ವಲಸೆ ತಪ್ಪಿಸುವುದು ಜಲ ಮೂಲಗಳ ಸಂರಕ್ಷಣೆ ಮಾಡುವುದು, ಸ್ತ್ರೀ ಪ್ರಧಾನ ಕುಟುಂಬಕ್ಕೆ ಆದ್ಯತೆ ನೀಡುವ ಮೂಲಕ ಮಹಿಳಾ ಸಬಲೀಕರಣಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಜೆಟ್‌ನಲ್ಲಿ ಘೋಷಿಸಿರುವ ಕಾಮಗಾರಿಗಳನ್ನು ತಾಲೂಕಿನಲ್ಲಿ ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ದನದ ಕೊಟ್ಟಿಗೆ ನಿರ್ಮಾಣ, ಸ್ಮಶಾನ ಅಭಿವೃದ್ಧಿ, ನಾಲಾ ಹೂಳೆತ್ತುವುದು ಸೇರಿದಂತೆ, ಶಾಲಾ ಕಾಂಪೌಂಡ, ಆಟದ ಮೈದಾನ, ಶೌಚಾಲಯ ಅಭಿವೃದ್ಧಿಗೊಳಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಸಹಾಯಕ ನಿರ್ದೇಶಕ ಪ್ರದೀಪ ಗಣೇಶ್ಕರ್ ಮಾತನಾಡಿ, ಈಗಾಗಲೇ ಕ್ರಿಯಾ ಯೋಜನೆಯಡಿ ಬದುವು ನಿರ್ಮಾಣ, ಕೃಷಿ ಹೊಂಡ, ದನದ ಕೊಟ್ಟಿಗೆ ನಿರ್ಮಾಣ ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಹಾಗೂ ಕೆರೆ ಹಳ್ಳ, ಗೋಮಾಳ, ಸ್ಮಶಾನ ಅಭಿವೃದ್ಧಿ, ಹಲವು ಸಮುದಾಯ ಕಾಮಗಾರಿಗಳನ್ನು ಸೇರಿಸಲಾಗಿದೆ ಎಂದರು. ರೈತರು ಕೂಲಿ ಕಾರ್ಮಿಕರು ನರೇಗಾ ಕಾಮಗಾರಿಗಳ ಬಗ್ಗೆ ತಮಗೆ ಬೇಕಾದ ಕಾಮಗಾರಿ ಮಾಡಿಕೊಳ್ಳಲು ಸ್ಥಳೀಯ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಸಹಾಯಕ ನಿರ್ದೇಶಕ ದೇವರಾಜ ಸಣ್ಣಕಾರ್ಗೆರ್, ಟಿಪಿಓ ದಿನೇಶ ಟಿ.ಎಚ್., ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ಇದ್ದರು.