ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಾವಕಾಶ

| Published : Jul 13 2024, 01:30 AM IST

ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಾವಕಾಶ
Share this Article
  • FB
  • TW
  • Linkdin
  • Email

ಸಾರಾಂಶ

job uportunity in jurmany for nursing

ಚಿತ್ರದುರ್ಗ:

ಜರ್ಮನ್ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ.ಟ್ಯಾಲೆಂಟ್ ಆರೆಂಜ್ ಸಂಸ್ಥೆಯು, ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ ಹಾಗೂ ಜಿಎನ್ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗ ಕಲ್ಪಿಸಲು ಮುಂದೆ ಬಂದಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ನರ್ಸಿಂಗ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ, ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಿ, ಸಂಸ್ಥೆಯ ವತಿಯಿಂದ ಊಟ ಹಾಗೂ ವಸತಿ ಸೌಲಭ್ಯ ನೀಡಿ ಜರ್ಮನಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತರು ಬಿಎಸ್ಸಿ (ನರ್ಸಿಂಗ್) ಬಿಎಸ್ಸಿ, ಜಿಎನ್ಎಂ ವಿದ್ಯಾರ್ಹತೆ ಹೊಂದಿರಬೇಕು, 38 ವರ್ಷ ವಯೋಮಿತಿ ಒಳಗಿರುವ ಮಹಿಳಾ ಅಭ್ಯರ್ಥಿ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಣ್ಣುಮಕ್ಕಳು ಚಿಕ್ಕ ಮಕ್ಕಳನ್ನು ಹೊಂದಿದ್ದಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಅವಕಾಶವಿರುವುದಿಲ್ಲ. ಭಾರತೀಯ ನರ್ಸಿಂಗ್ ಲೈಸೆನ್ಸ್ ಹೊಂದಿರುವುದು ಕಡ್ಡಾಯ. ಉದ್ಯೋಗಾಕಾಂಕ್ಷಿಗಳು ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯ ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಕಚೇರಿಯ ದೂರವಾಣಿ ಸಂಖ್ಯೆ 08194-231394ಗೆ ಸಂಪರ್ಕಿಸಬಹುದು.========