ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ

| Published : Oct 10 2024, 02:24 AM IST

ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.

ಕನ್ನಡಪ್ರಭ ವಾರ್ತೆ ಯರಗಟ್ಟಿ

ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.

ಸಮೀಪದ ತಲ್ಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಸದಸ್ಯತ್ವ ಪಡೆದವರಿಗೆ ಪಕ್ಷವೂ ಸಹ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ. ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರತನ್ನು ಪಕ್ಷವೂ ಪರಿಗಣನೆಗೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ತಾಪಂ ಮಾಜಿ ಅಧ್ಯಕ್ಷ ವಿನಯಕುಮಾರ ದೇಸಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಸೇವೆ, ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಮ್ಮ ದೇಶವನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಲ್ಲಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಎಂದರು.

ಸವದತ್ತಿ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಪುಂಡಲೀಕ ಮೇಟಿ ಮಾತನಾಡಿ, ದೇಶವ್ಯಾಪ್ತಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ವಾರ್ಡ್‌ ಬೂತ್ ಮಟ್ಟದಲ್ಲಿ ತೆರಳಿ ಸದಸ್ಯತ್ವ ಅಭಿಯಾನ ನಡೆಸಬೇಕು ಎಂದರು.

ತೋರಗಲ್ಲ ಮಠದ ದೀಪಕ ಸ್ವಾಮಿ, ಪಿಕೆಪಿಎಸ್ ಅಧ್ಯಕ್ಷ ಮಹಾರುದ್ರಪ್ಪ ಉಪ್ಪಿನ, ಸವದತ್ತಿ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಕಾಶ ನರಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಪ್ಪ ಅಂಗಡಿ, ಗೌಡಪ್ಪ ನಾಯ್ಕರ, ರಾಜು ಬಾರ್ಕಿ, ನೀಲಕಂಠ ಶಿವಪೂಜಿ, ಎ.ವಿ.ಇಂಗಳೆ, ಬಸವರಾಜ ಕಟ್ಟಿಮನಿ, ಈರಯ್ಯ ಹಿರೇಮಠ, ಈರಣ್ಣ ವೀರಶೆಟ್ಟ, ಬಸವರಾಜ ಇಂಚಲ, ಪುಂಡಲೀಕ ಮೇಟಿ ಸೇರಿದಂತೆ ಕಾರ್ಯಕರ್ತರು ಇದ್ದರು.