ದೊಡ್ಡಬಳ್ಳಾಪುರ: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಹೇಳಿದರು.

ದೊಡ್ಡಬಳ್ಳಾಪುರ: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಬಾಕ್ಸ್‌............

ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು:

ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು. ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ

ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

22ಕೆಡಿಬಿಪಿ4-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಕುಷ್ಠ ರೋಗ ನಿರ್ಮೂಲನೆಯೊಂದಿಗೆ ಕುಷ್ಠ ರೋಗ ಮುಕ್ತ ಜಿಲ್ಲೆ ಸಂಕಲ್ಪ ಸಾಕಾರದ ಪ್ರತಿಜ್ಞೆ ಕೈಗೊಳ್ಳಲಾಯಿತು.