ಪ್ರಜಾಪ್ರಭುತ್ವ ದಿನಾಚರಣೆ ಯಶಸ್ಸಿಗೆ ಕೈ ಜೋಡಿಸಿ

| Published : Sep 11 2024, 01:15 AM IST

ಪ್ರಜಾಪ್ರಭುತ್ವ ದಿನಾಚರಣೆ ಯಶಸ್ಸಿಗೆ ಕೈ ಜೋಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜಾಪ್ರಭುತ್ವ ದಿನಾಚರಣೆ ಯಶಸ್ಸಿಗೆ ಕೈ ಜೋಡಿಸಿ

ಕನ್ನಡಪ್ರಭ ವಾರ್ತೆ ಶಿರಾ ಪ್ರಜಾಪ್ರಭುತ್ವದ ಉಳಿವಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮ ಆಚರಿಸುವ ಬಗ್ಗೆ ನಗರದ ಮಿನಿವಿಧಾನಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಸಂಸದೀಯ ವ್ಯವಸ್ಥೆ ಮೂಲ ಅನುಭವ ಮಂಟಪ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಕೂಡ ಸಂವಿಧಾನ ರಚನೆ ಸಮಯದಲ್ಲಿ ಅನುಭವ ಮಂಟಪದ ಮಾಹಿತಿಯನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಬೀದರ್ ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವುದು ಒಂದು ವಿಶೇಷವಾಗಿದೆ. ಪ್ರಜಾಪ್ರಭುತ್ವ ಉಳಿಸಬೇಕು. ಪ್ರಜಾಪ್ರಭುತ್ವ ಬೆಳೆಸಬೇಕು. ಪ್ರಜಾಪ್ರಭುತ್ವ ಉಳಿದರೆ ಮಾತ್ರ ಆಶೋತ್ತರಗಳು ಉಳಿಯುತ್ತವೆ. ಆದ್ದರಿಂದ ತಾಲೂಕಿನ ಎಲ್ಲಾ ಇಲಾಖೆ ಮುಖ್ಯಸ್ಥರು, ರೈತಪರ, ಕನ್ನಡಪರ, ಮಹಿಳಾಪರ, ಪ್ರಗತಿಪರ, ಸಂಘಟನೆಗಳ ಮುಖಂಡರುಗಳು, ಹಾಗೂ ತಾಲೂಕಿನ ಎಲ್ಲಾ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಸಂಘಟನಾ ಸಂಚಾಲಕರು ಕೈ ಜೋಡಿಸಿ ಯಶಸ್ವಿಗೊಳಿಸಿ ಎಂದರು. ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಸಚ್ಚಿದಾನಂದ ಕುಂಚನೂರು, ತಾಪಂ ಇಓ ಹರೀಶ್, ಬಿಇಒ ಸಿ.ಎನ್.ಕೃಷ್ಣಪ್ಪ, ಡಿವೈಎಸ್ಪಿ ಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಜಾನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ, ನಗರ ಸರ್ಕಲ್ ಇನ್ಸಪೆಕ್ಟರ್‌ ಮಂಜೇಗೌಡ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.