ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹೋರಾಟಕ್ಕೆ ಕೈ ಜೋಡಿಸಿ: ಬಿ.ಜೆ.ಜಗದೀಶ್‌

| Published : Aug 13 2025, 12:30 AM IST

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹೋರಾಟಕ್ಕೆ ಕೈ ಜೋಡಿಸಿ: ಬಿ.ಜೆ.ಜಗದೀಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಬೀರೂರು, ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಈಡೇರಿಸುವಂತೆ ಒತ್ತಾಹಿಸಿ ನಮ್ಮ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ಕರೆ ನೀಡಿದ ಹೋರಾಟಕ್ಕೆ ಚಿಕ್ಕಮಗಳೂರು ಜಿಲ್ಲೆಯಿಂದ ಸಂಪೂರ್ಣ ಸಹಕಾರ ಮತ್ತು ಬೆಂಬಲವಿದೆ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಜೆ.ಜಗದೀಶ್‌ ತಿಳಿಸಿದರು.

- ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ಕರೆ ನೀಡಿದ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ

ಕನ್ನಡಪ್ರಭ ವಾರ್ತೆ, ಬೀರೂರು

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಈಡೇರಿಸುವಂತೆ ಒತ್ತಾಹಿಸಿ ನಮ್ಮ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ಕರೆ ನೀಡಿದ ಹೋರಾಟಕ್ಕೆ ಚಿಕ್ಕಮಗಳೂರು ಜಿಲ್ಲೆಯಿಂದ ಸಂಪೂರ್ಣ ಸಹಕಾರ ಮತ್ತು ಬೆಂಬಲವಿದೆ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಜೆ.ಜಗದೀಶ್‌ ತಿಳಿಸಿದರು.

ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಹಾಗೂ ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ಕೂಡಲೇ ಅನುಮೋದನೆ ನೀಡುವಂತೆ ಹಾಗೂ ಶಿಕ್ಷಕರ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಮಾಡಿತ್ತು.

ಸಿಎಂ ಹಾಗೂ ಶಿಕ್ಷಣ ಸಚಿವರ ನೇತೃತ್ವದಲ್ಲಿ ಅಂದು 04-09-2024 ರಂದು ಸುದೀರ್ಘ ಸಭೆ ನಡೆಸಿ ಒಂದು ಸಮಿತಿ ರಚಿಸಿ 30 ದಿನಗಳಲ್ಲಿ ಸಮಿತಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ ಶಿಕ್ಷರ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಸ್ಪಷ್ಟತೆಯುಳ್ಳ ಭರವಸೆ ಸಿಎಂ ನೀಡಿದ್ದರು.

ಶಿಕ್ಷಕರ ಇನ್ನಿತರ ಸೇವಾ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ನೀಡಿದ ಭರವಸೆ ಇಂದು ಭರವಸೆಯಾಗಿಯೇ ಉಳಿದಿದ್ದು, ಸಿಎಂ ಅವರ 1 ತಿಂಗಳ ಭರಸವೆಗೆ ಈಗ ಬರೋಬ್ಬರಿ 11 ತಿಂಗಳಾಗಿವೆ.

ಇದರಿಂದ ಶಿಕ್ಷಕ ವೃಂದಕ್ಕೆ ನೋವಾಗಿದೆ. ಪುನಃ ಇದೀಗ ಅನಿವಾರ್ಯವಾಗಿ ಹಂತ ಹಂತದ ಹೋರಾಟದ ಹಾದಿಗೆ ಶಿಕ್ಷಕರ ಸಂಘ ಇಳಿಯಬೇಕಾಗಿರುವ ಪರಿಸ್ಥಿತಿ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಈ ಹೋರಾಟದಲ್ಲಿ ಭಾಗವಹಿಸಬೇಕು. ಜೊತೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇದೇ 2025ರ ಆ.25ರೊಳಗಾಗಿ ನ್ಯಾಯ ಒದಗಿಸದಿದ್ದರೇ ಮುಂಬರುವ ದಿನಗಳಲ್ಲಿ ಶಿಕ್ಷಕರ ಸಂಘ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಒತ್ತಾಯಿಸಿದರು.

12 ಬೀರೂರು

1

ಬಿ.ಜೆ.ಜಗದೀಶ್

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ