ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೈ ಜೋಡಿಸಿ

| Published : Aug 18 2024, 01:54 AM IST

ಸಾರಾಂಶ

ಇಂದು ನಾವು ನಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನೇ ದೇಶದ ಆಸ್ತಿಯನ್ನಾಗಿ ಮಾಡಲು ಪಾಲಕರಾದ ನಾವೆಲ್ಲರೂ ಶ್ರಮ ವಹಿಸೋಣ

ಮುಂಡರಗಿ: ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ನಿತ್ಯ ಸತ್ಯ ಶುದ್ಧ ಕಾಯಕವನ್ನು ಮನಃ ಪೂರ್ವಕವಾಗಿ ಮಾಡಬೇಕು ಎಂದು ಹಾರೋಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗುರುಸಿದ್ದಪ್ಪ ಹಂಸಿ ಹೇಳಿದರು.

ಅವರು ಗುರುವಾರ ತಾಲೂಕಿನ ಹಾರೋಗೇರಿ ಗ್ರಾಮದ ತ್ರಿವಳಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಜರುಗಿದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ನಾವು ನಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನೇ ದೇಶದ ಆಸ್ತಿಯನ್ನಾಗಿ ಮಾಡಲು ಪಾಲಕರಾದ ನಾವೆಲ್ಲರೂ ಶ್ರಮ ವಹಿಸೋಣ ಎಂದರು.

ಗುರುಮಾತೆ ಹನುಮಂತಮ್ಮ ಮಾತನಾಡಿ,ಸ್ವಾತಂತ್ರ್ಯ ಹೋರಾಟದ ರೋಚಕ ಘಟನಾವಳಿಗಳನ್ನು ಮಕ್ಕಳಿಗೆ ಕಟ್ಟಿಕೊಟ್ಟರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷೆ ಮಹಾದೇವಕ್ಕ ಹಳ್ಳಿ, ಕೆಜಿಎಸ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕುಬೇರ ವೀರಾಪೂರ, ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಾಬುಸಾಬ ನದಾಫ್, ಹುಸೇನಸಾಬ ನದಾಫ್, ಯಲ್ಲಪ್ಪ ಭಜಮ್ಮನವರ್, ಬಾಲೆಸಾಬ್ ನದಾಫ್ ಹಾಗೂ ತ್ರಿವಳಿ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿದ್ದರು.

ಶಿಕ್ಷಕರಾದ ವಿ.ಎಸ್. ಕಮ್ಮಾರ ಸ್ವಾಗತಿಸಿದರು. ವಿ.ಎಸ್.ಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೆ.ಆರ್.ಚೋಪದಾರ ನಿರೂಪಿಸಿದರು. ಜಿ.ಎಸ್.ಜಾಲಾಪೂರ ವಂದಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಶಿಕ್ಷಕಿಯರಾದ ಕುಸುಮಾ ರಾಯಣ್ಣವರ, ದೀಪಾ ಎನ್ ಕಾರ್ಯಕ್ರಮ ನಡೆಸಿಕೊಟ್ಟರು.