ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಿ: ಗಾಯಕವಾಡ

| Published : Feb 11 2024, 01:46 AM IST

ಸಾರಾಂಶ

ಮಹಾಲಿಂಗಪುರ: ಪಟ್ಟಣದ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತ್ಯುತ್ಸವ ಆಚರಿಸಲಾಯಿತು. ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಮಾತನಾಡಿ, ಪ್ರತಿಯೊಬ್ಬರೂ ದೇಶಕ್ಕಾಗಿ ಸಮರ್ಪಣೆ ಮನೋಭಾವದಿಂದ ವ್ಯಕ್ತಿ ಜತೆ ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು. ಸ್ವಾಮಿ ವಿವೇಕಾನಂದ ಹಾಗೂ ಸುಭಾಸ್ ಚಂದ್ರ ಬೋಸ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಪ್ರತಿಯೊಬ್ಬರೂ ದೇಶಕ್ಕಾಗಿ ಸಮರ್ಪಣೆ ಮನೋಭಾವದಿಂದ ವ್ಯಕ್ತಿ ಜತೆ ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಹೇಳಿದರು.

ಪಟ್ಟಣದ ಕೆಎಲ್ಇ ಪಾಲಿಟೆಕ್ನಿಕ್ ನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುಸಂಸ್ಕೃತ ಜನಾಂಗ ಸೃಷ್ಟಿಯಾಗಬೇಕಾದರೆ ಯುವಕರಲ್ಲಿ ರಾಷ್ಟ್ರಪ್ರೇಮ ಬೆಳೆಸುವ ಅಗತ್ಯವಿದೆ. ಬೋಸ್ ಹಾಗೂ ವಿವೇಕಾನಂದರ ಆದರ್ಶಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕಿದೆ. ಟಿವಿ, ಮೊಬೈಲ್ ನಿಂದಾಗಿ ದೇಶದ ತಾರುಣ್ಯ ಹಾಳಾಗುತ್ತಿದೆ. ದೇಶದಲ್ಲಿ ವಿದೇಶಿ ಸಂಸ್ಕೃತಿ ಬೆಳೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಾಚಾರ್ಯ ಎಸ್.ಐ.ಕುಂದಗೋಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಫ್ಟವೇರ್ ಕ್ಷೇತ್ರದಿಂದಾಗಿ ಭಾರತ ವಿಶ್ವಗುರುವಾಗಲು ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಸ್ವಾಮಿ ವಿವೇಕಾನಂದ ಹಾಗೂ ಸುಭಾಸ್ ಚಂದ್ರ ಬೋಸ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು. ಪುರಸಭೆ ಸದಸ್ಯ ರವಿ ಜವಳಗಿ, ಅಂಜನಾ ಮಲಾಜ, ಅಭಿಷೇಕ ಲಮಾಣಿ, ಚೈತ್ರಾ ಹುದ್ದಾರ, ನಿರ್ಮಲಾ ಫಕೀರಪುರ, ಪ್ರಿಯಾ ಸೋನಾರ, ಸುಮನ್ ಖೋತ ಉಪಸ್ಥಿತರಿದ್ದರು.