ಸಾರಾಂಶ
ಗುಟ್ಕಾ, ಮಾದಕ ವಸ್ತುಗಳು, ಮದ್ಯಪಾನ ಹಾಗೂ ಡ್ರಗ್ಸ್ ಸೇವನೆಗೆ ಸಿಲುಕಿರುವ ಜನರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿ ತಮ್ಮನ್ನು ನಂಬಿರುವ ಕುಟುಂಬದ ಸದಸ್ಯರನ್ನು ನಡು ನೀರಿನಲ್ಲಿ ಕೈಬಿಟ್ಟು ಅಕಾಲಿಕ ಸಾವಿಗೆ ಶರಣಾಗುತ್ತಿದ್ದಾರೆ.
ಕೆ.ಆರ್.ಪೇಟೆ: ಬೀಡಿ, ಸಿಗರೇಟು, ಮದ್ಯಪಾನ ಸೇರಿದಂತೆ ತಂಬಾಕು ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳಿಂದ ಆರೋಗ್ಯವಂತ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುಮಾರಾಣಿ ಕರೆ ನೀಡಿದರು.
ಪಟ್ಟಣದಲ್ಲಿ ತಾಲೂಕು ಆಡಳಿತವು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ದಿನಾಚರಣೆಯಲ್ಲಿ ನಡೆದ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿ, ಬೀಡಿ, ಸಿಗರೇಟು, ಮದ್ಯಪಾನ ಸೇರಿದಂತೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಯುವಜನರು ಹಾಗೂ ವಿದ್ಯಾರ್ಥಿಗಳು, ಕೃಷಿ ಕೂಲಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗಿ ಅಕಾಲಿಕವಾಗಿ ಸಾವಿಗೆ ಶರಣಾಗುತ್ತಿದ್ದಾರೆ ಬೇಸರ ವ್ಯಕ್ತಪಡಿಸಿದರು.ಗುಟ್ಕಾ, ಮಾದಕ ವಸ್ತುಗಳು, ಮದ್ಯಪಾನ ಹಾಗೂ ಡ್ರಗ್ಸ್ ಸೇವನೆಗೆ ಸಿಲುಕಿರುವ ಜನರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿ ತಮ್ಮನ್ನು ನಂಬಿರುವ ಕುಟುಂಬದ ಸದಸ್ಯರನ್ನು ನಡು ನೀರಿನಲ್ಲಿ ಕೈಬಿಟ್ಟು ಅಕಾಲಿಕ ಸಾವಿಗೆ ಶರಣಾಗುತ್ತಿದ್ದಾರೆ.
ಆರೋಗ್ಯವಂತ ನಾಗರಿಕ ಸಮಾಜಕ್ಕೆ ಮುಳ್ಳಾಗಿರುವ ತಂಬಾಕು ಉತ್ಪನ್ನಗಳು ಹಾಗೂ ಮಾದಕ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಿ ನಿಲ್ಲಿಸುವವರೆಗೂ ನಾವು ಜಾಗೃತರಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ತಾಲೂಕು ನಯನಜ ಕ್ಷತ್ರೀಯ ಸಮಾಜದ ಅಧ್ಯಕ್ಷ ಡಾ.ಕೆ.ಎಂ.ಶಿವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವಿದ್ಯಾವತಿ, ಗ್ರೇಡ್- 2 ತಹಸೀಲ್ದಾರ್ ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಕುಮಾರ್ ಸೇರಿದಂತೆ ಹಲವರು ಇದ್ದರು.