ಸಾರಾಂಶ
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಕೈ ಜೋಡಿಸಬೇಕಾಗಿದೆ ಎಂದು ಬಿವಿವಿ ಸಂಘದ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪೂರ್ಣಿಮಾ ಮೇಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಕೈ ಜೋಡಿಸಬೇಕಾಗಿದೆ ಎಂದು ಬಿವಿವಿ ಸಂಘದ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪೂರ್ಣಿಮಾ ಮೇಟಿ ಹೇಳಿದರು.ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಇಂದಿನ ಯುವಕರು ಹಲವಾರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಮ್ಮ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಗನ್ನಾಥ ಚವ್ಹಾಣ ಅವರು ಮಾತನಾಡಿ, ಒಬ್ಬ ವ್ಯಕ್ತಿ ದುಶ್ಚಟಕೆ ಬಲಿಯಾಗಲು ಪ್ರಮುಖ ಕಾರಣಗಳನ್ನು ಮತ್ತು ಅದು ಹಂತ ಹಂತವಾಗಿ ಹೇಗೆ ಬಲಿಪಶು ಆಗುತ್ತಾನೆ ಎಂಬುದರ ಕುರಿತು ಮಾಹಿತಿ ನೀಡಿದರು.
ವೇದಿಕೆ ಮೇಲೆ ಪದವಿ ಪೂರ್ವ ವಿಭಾಗದ ಸಂಯೋಜಕ ಗಿರಿಜಾ ಶೆಲ್ಲಿಕೇರಿ ಹಾಗೂ ಎನ್.ಎಸ್.ಎಸ್. ಘಟಕದ ಸಂಯೋಜನಾಧಿಕಾರಿ ಪ್ರಕಾಶ ತಿಪ್ಪಣ್ಣವರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕವಿತಾ ಪಾಟೀಲ ಪ್ರತಿಜ್ಞಾವಿಧಿ ಬೋಧಿಸಿದರು. ಮೀನಾಕ್ಷಿ ಚವ್ಹಾಣ ಸ್ವಾಗತಿಸಿದರು. ಕುಮಾರಿ ಭಾಗ್ಯ ಹಡಪದ ವಂದಿಸಿದರು. ಲಕ್ಷ್ಮಿ ಪಟತ್ತಾರ್ ಕಾರ್ಯಕ್ರಮ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))