ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೈಜೋಡಿಸಿ

| Published : Mar 25 2025, 12:45 AM IST

ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೈಜೋಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೇವಲ ಪಂಚಾಯಿತಿ ವತಿಯಿಂದ ಮಾತ್ರ ಸಾಧ್ಯವಿಲ್ಲ. ಜತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೈಜೋಡಿಸಿದರೆ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತವೆ.

ಕುಷ್ಟಗಿ:

ಮಕ್ಕಳ ಹಕ್ಕುಗಳ ಸಮರ್ಪಕ ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿ ಜತೆಗೆ ಇಲಾಖೆಗಳು ಕೈಜೋಡಿಸಬೇಕು ಎಂದು ಕೇಸೂರು ಗ್ರಾಪಂ ಪಿಡಿಒ ಗಂಗಯ್ಯ ವಸ್ತ್ರದ ಹೇಳಿದರು.

ತಾಲೂಕಿನ ಗುಡಿಕಲಕೇರಿ ಶಾಲೆಯಲ್ಲಿ ಕೇಸೂರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೇವಲ ಪಂಚಾಯಿತಿ ವತಿಯಿಂದ ಮಾತ್ರ ಸಾಧ್ಯವಿಲ್ಲ. ಜತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೈಜೋಡಿಸಿದರೆ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತವೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣ, ಬಾಲ್ಯ ವಿವಾಹ, ಬಾಲ ಕಾರ್ಮಿಕರ ಪ್ರಕರಣಗಳು ಕಂಡು ಬರುತ್ತಿವೆ. ಪಾಲಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿದಾಗ ಇವುಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸರ್ಕಾರ ಉಚಿತ ಶಿಕ್ಷಣ, ಪಠ್ಯಪುಸ್ತಕ, ಊಟ, ಬಟ್ಟೆ, ವಸತಿ ವ್ಯವಸ್ಥೆ, ಹಾಲು, ಮೊಟ್ಟೆ ಸೇರಿದಂತೆ ಅನೇಕ ಸೌಲಭ್ಯ ನೀಡುತ್ತಿದ್ದು ಇವುಗಳನ್ನು ಪಡೆದುಕೊಂಡು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕೆಂದರು.

ಕೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಇರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೊಟ್ಟರೆ ಹಂತ-ಹಂತವಾಗಿ ಪರಿಹರಿಸಲಾಗುವುದು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮಕ್ಕಳು ಹಾಗೂ ಶಿಕ್ಷಕರಿಗೆ ತಿಳಿಸಿದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಶ್ರೀದೇವಿ ವೀರಯ್ಯ ಮಳಿಮಠ, ಉಪಾಧ್ಯಕ್ಷೆ ಹೇಮಾವತಿ ಗೋಪಾಲನಾಯಕ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಬನ್ನಿಗೊಳ, ಗ್ರಾಪಂ ಸದಸ್ಯರಾದ ಗುರುನಗೌಡ ಪಾಟೀಲ, ಉಮೇಶ ಮಡಿವಾಳರ, ಅಂಗನವಾಡಿ ಮೇಲ್ವಿಚಾರಕಿ ಭುವನೇಶ್ವರಿ ಸಂಕಾನಟ್ಟಿ, ಆಶಾ ಕಾರ್ಯಕರ್ತೆ ಸಂಗಮ್ಮ ಟೆಂಗುಂಟಿ, ಸಂಜೀವಿನಿ ಒಕ್ಕೂಟದ ಭಾಗ್ಯಶ್ರೀ ಅಂಗಡಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಕೇಸೂರು, ತೋನಸಿಹಾಳ, ಕಡೇಕೊಪ್ಪ, ನಡುವಲಕೊಪ್ಪ, ಗುಡಿಕಲಕೇರಿ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಇದ್ದರು.