ಸಾರಾಂಶ
ಹಾವೇರಿ: ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸೆ.೧೫ ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಶೇಷವಾಗಿ ಆಚರಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಕೋರಿದ್ದಾರೆ. ಭಾರತದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವದ ಮೌಲ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.೧೫ರಂದು ಬೆಳಗ್ಗೆ ೯ ಗಂಟೆಯಿಂದ ೯-೩೦ರವರೆಗೆ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುಮಾರಪಟ್ಟಣಂದಿಂದ -ಕವಲೆತ್ತು- ಚಳಗೇರಿ- ರಾಣೇಬೆನ್ನೂರು-ಗುಡ್ಡದಾನ್ವೇರಿ-ಕೆರಿಮಲ್ಲಾಪೂರ- ಗುಡಿಹೊನ್ನತ್ತಿ -ಹಳೇಹೊನ್ನತ್ತಿ- ಮಾದಾಪೂರ ತಿಮ್ಮಾಪೂರ- ಗುತ್ತಲ- ನೆಗಳೂರು- ಮರೋಳ- ಹಾಲಗಿ ಮಾರ್ಗವಾಗಿ ಲಕ್ಷ್ಮೇಶ್ವರ ತಾಲೂಕು ಬಾಲೇಹೊಸೂರವರೆಗೆ ೭೫ ಕಿ.ಮೀ. ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.ಈ ಮಾರ್ಗದಲ್ಲಿ ಶಾಲಾ-ಕಾಲೇಜುಗಳನ್ನು ಗುರುತಿಸಲಾಗಿದ್ದು, ಪ್ರತಿ ಒಂದು ಕಿ.ಮೀ.ಗೆ ಒಂದು ಸಾವಿರ ಜನರು ಬೇಕಾಗುತ್ತಾರೆ. ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ದಲಿತ ಸಂಘಟನೆಗಳು, ಸಹಕಾರಿ ಸಂಘಟನೆಗಳು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆ ಮಾಡಲು ಪ್ರತಿ ಎರಡುವರೆ ಕಿ.ಮೀ.ಗೆ ಓರ್ವ ತಾಲೂಕು ಮಟ್ಟದ ನೋಡಲ್ ಅಧಿಕಾರಿ ಹಾಗೂ ಪ್ರತಿ ಐದು ಕಿ.ಮೀ.ಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ಓರ್ವ ಎ.ಎಸ್.ಐ. ಹೆಡ್ ಕಾನಸ್ಟೇಬಲ್, ಕಾನಸ್ಟೇಬಲ್‌ರನ್ನು ಸೂಕ್ತ ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಹಾಗೂ ಆರೋಗ್ಯ ಸಿಬ್ಬಂದಿ ಸಹ ನೇಮಕ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ತಮ್ಮ ಭಾವಚಿತ್ರವುಳ್ಳ ಪ್ರಮಾಣವನ್ನು ನೀಡಲಾಗುವುದು. ಭಾಗವಹಿಸುವ ಎಲ್ಲರೂ ವೆಬ್‌ಸೈಟ್
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಮಾನವ ಸರಪಳಿ ಮಾರ್ಗದುದ್ದಕ್ಕೂ ಅಗತ್ಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ತಿಳಿಸಿದ್ದಾರೆ.