ಸಾರಾಂಶ
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸಮಯಕ್ಕೆ ಸರಿಯಾಗಿ ಹಾಜರಾಗುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಬೇಕು ಎಂದು ಶಾಸಕ ಎಂ .ಆರ್. ಮಂಜುನಾಥ್ ತಿಳಿಸಿದರು.
ಕನ್ನಡಪ್ರಭ ವಾರ್ತೆ, ಹನೂರು
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸಮಯಕ್ಕೆ ಸರಿಯಾಗಿ ಹಾಜರಾಗುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಬೇಕು ಎಂದು ಶಾಸಕ ಎಂ .ಆರ್. ಮಂಜುನಾಥ್ ತಿಳಿಸಿದರು.ತಾಲೂಕಿನ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1ರಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಂತೆ ಅತ್ಯಂತ ವಿಜೃಂಭಣೆಯಿಂದ ನಾವೆಲ್ಲರೂ ಸೇರಿ ಆಚರಣೆ ಮಾಡಬೇಕಾಗಿದೆ. ಅದಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರದ ಪ್ರಕಾರವೇ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕಾಗಿದೆ. ಕೇಂದ್ರ ಸ್ಥಾನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಹಾಜರಿದ್ದು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದರು.ಶತಮಾನೋತ್ಸವದ ನಾಡಗೀತೆ: ನಮ್ಮ ನಾಡಗೀತೆಗೆ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಹ ಸುಮಾರು 500ಕ್ಕೂ ಹೆಚ್ಚು ಮಕ್ಕಳು ಒಟ್ಟಾಗಿ ಸೇರಿ ನಾಡಗೀತೆಯನ್ನು ಹಾಡುವ ಮೂಲಕ ಶತಮಾನೋತ್ಸವದ ಆಚರಣೆಯನ್ನು ಮಾಡಲು ಒಟ್ಟಾಗಿ ಒಕ್ಕೊರಲಿನಿಂದ ತೀರ್ಮಾನ ಮಾಡಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ:ಕನ್ನಡ ನಾಡು ನುಡಿಯನ್ನು ಕುರಿತಂತೆ ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡುವಂತೆ ಸ್ಥಳದಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ರವರಿಗೆ ಶಾಸಕರು ಸೂಚಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಚೈತ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಸಬ್ ಇನ್ಸ್ಪೆಕ್ಟರ್ ರವಿ, ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಅಂಬಿಕಾ, ಹಾಗೂ ಪಶು ಸಂಗೋಪನೆ ಇಲಾಖೆಯ ಡಾ. ಸಿದ್ದರಾಜು, ದೈಹಿಕ ಶಿಕ್ಷಣ ಪರೀಕ್ಷಕ ಕೆಂಪರಾಜು, ಪರಿಶಿಷ್ಟ ಪಂಗಡ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ಮಹೇಶ್, ಪೊಲೀಸ್ ಇಲಾಖೆಯವರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಉಪ ನೊಂದಣ್ಣಾಧಿಕಾರಿ ಉಷಾ ಸೇರಿದಂತೆ ಪಟ್ಟಣ ಪಂಚಾಯಿತಿ, ಆರೋಗ್ಯ ನಿರೀಕ್ಷಕ ಪ್ರಕಾಶ್ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಸಹ ಉಪಸ್ಥಿತರಿದ್ದರು.;Resize=(128,128))
;Resize=(128,128))