ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ಶ್ಯಾಮ ಸುಂದರ್

| Published : Apr 23 2024, 12:47 AM IST / Updated: Apr 23 2024, 12:32 PM IST

ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ಶ್ಯಾಮ ಸುಂದರ್
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ಎಸ್. ಶ್ಯಾಮಸುಂದರ್ ಗಾಯಕವಾಡ್ ಆರೋಪಿಸಿದರು.

ಶಿರಸಿ: ಮರಾಠ ಸಮುದಾಯದ ಮುಖಂಡನಾದ ನನಗೆ ಬಿಜೆಪಿ ಟಿಕೆಟ್ ನೀಡದೇ ಅನ್ಯಾಯ ಮಾಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರಿಗೆ ಬೆಂಬಲ ನೀಡುತ್ತಿದ್ದೇನೆ. ನೋವಿನಿಂದ ಬಿಜೆಪಿಯನ್ನು ತ್ಯಜಿಸುತ್ತಿದ್ದೇನೆ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ಎಸ್. ಶ್ಯಾಮಸುಂದರ್ ಗಾಯಕವಾಡ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ೬ ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದರು.

ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಮರಾಠ ಸಮಾಜಕ್ಕೆ ಅನ್ಯಾಯ ಮಾಡಿದ್ದು, ಮರಾಠ ಸಮಾಜದವರನ್ನು ರಾಜ್ಯದಲ್ಲಿ ಗುಲಾಮರಂತೆ ಕಡೆಗಣಿಸಿದ್ದಾರೆ. ಮರಾಠ ಸಮಾಜಕ್ಕೆ ಮಂತ್ರಿ, ರಾಜ್ಯಸಭಾ, ವಿಧಾನಸಭಾ, ವಿಧಾನಪರಿಷತ್ತು ಸ್ಥಾನವನ್ನು ನೀಡಿಲ್ಲ. ಬಿಜೆಪಿ ನನ್ನನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇನ್ನಿತರ ಮುಖಂಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಈಶ್ವರ ಶಿಂಧೆ, ರಾಜ್ಯ ಕಾರ್ಯದರ್ಶಿ ಪಾಂಡುರಂಗ ಪಾಟೀಲ ಇದ್ದರು.