ಡೋಣಿ ತೀರಿದ ಬೆಳೆ ಹಾನಿ ಪರಿಶೀಲನೆಗೆ ಜಂಟಿ ಸಮೀಕ್ಷೆ

| Published : Oct 01 2024, 01:31 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚಿಗೆ ತಾಲೂಕಿನ ಡೋಣಿ ತೀರಿದ ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹಾನಿಯ ಕುರಿತು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಿ ಶೀಘ್ರ ವರದಿ ಸಿದ್ಧಪಡಿಸುವಂತೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚಿಗೆ ತಾಲೂಕಿನ ಡೋಣಿ ತೀರಿದ ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹಾನಿಯ ಕುರಿತು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಿ ಶೀಘ್ರ ವರದಿ ಸಿದ್ಧಪಡಿಸುವಂತೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರವಾಹ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ವಿಜಯಪುರ ಸೇರಿದಂತೆ ಡೋಣಿ ತೀರದ ಗ್ರಾಮಗಳಲ್ಲಿ ಭಾರಿ ಮಳೆಯಾಗಿತ್ತು. ಇದರಿಂದ ಡೋಣಿ ನದಿ ತೀರದ ತಾಲೂಕಿನ 13ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾಗೂ ರಸ್ತೆ ಸಂಪರ್ಕ ಹಾನಿಯಾಗಿತ್ತು. ಈ ಬಗ್ಗೆ, ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಮಾಹಿತಿ ಪಡೆದು ವಿಸ್ತೃತ ವರದಿ ನೀಡುವಂತೆ ತಹಸೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಸೂಚಿಸಿದರು.ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಟೆದ ಮಾತನಾಡಿ, ಅಧಿಕಾರಿಗಳು ಪ್ರವಾಹ ಪರಿಸ್ಥಿತಿ ಬಗ್ಗೆ ನಿಗಾ ವಹಿಸಿ ಹಾಗೂ ಬೆಳೆ ಹಾನಿಯ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜಂಟಿ ಸಮೀಕ್ಷೆಗೆ ಸೂಚಿಸಿದರು.ಸಭೆಯಲ್ಲಿ ತಾಪಂ ಇಒ ಭಾರತಿ ಚೆಲುವಯ್ಯ, ಪಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಸಿಂದಗಿ ಜಿಪಂ ಎಇಇ ಜಿ.ವೈ.ಮುರಾಳ, ಕೃಷಿ ಇಲಾಖೆಯ ಎಚ್.ವೈ.ಸಿಂಗೆಗೋಳ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಭೀಮಾಶಂಕರ ಕನ್ನೂರ, ಪಿಡಬ್ಲ್ಯೂಡಿ ಎಇಇ ಅರುಣಕುಮಾರ ವಡಗೇರಿ, ತೋಟಗಾರಿಕೆ ಇಲಾಖೆಯ ಅಕ್ಷತಾ ಹೊಂಗಲ್, ತಾಪಂ ಯೋಜನಾಧಿಕಾರಿ ಶ್ರೀನಿವಾಸ ಪವಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.