ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಮಲೆಮಾದೇಶ್ವರ ಬೆಟ್ಟದ ಕ್ಷೇತ್ರಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಮಾಸ್ಟರ್ ಪ್ಲಾನ್ ಆವರಣದಲ್ಲಿ ಜಂಟಿ ಸರ್ವೆ ಕಾರ್ಯ ಆರಂಭವಾಗಿದೆ.ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಮಾಸ್ಟರ್ ಪ್ಲಾನ್ ಆವರಣದಲ್ಲಿ ಇರುವಂತ ಆಸ್ತಿಪಾಸ್ತಿ ಮತ್ತು ಮನೆಗಳನ್ನು ಡೋರ್ ಟು ಡೋರ್ ಭೇಟಿ ನೀಡಿ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸಿಬ್ಬಂದಿ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಅಧಿಕಾರಿ ಸಿಬ್ಬಂದಿ ಜಂಟಿಯಾಗಿ ಸರ್ವೆ ನಡೆಸಿದರು. ಮನೆಮನೆ ಸಮೀಕ್ಷೆಗೆ ಜಿಲ್ಲಾಧಿಕಾರಿ ನೀಡಿರುವ ಆದೇಶದ ಮೇರೆಗೆ ಅಧಿಕಾರಿಗಳ ತಂಡ ಸರ್ವೆ ಕಾರ್ಯ ಮಾಡಲಾಗಿದೆ.ಮಾಸ್ಟರ್ ಪ್ಲಾನ್ ಆವರಣದಲ್ಲಿ ಜಂಟಿ ಸರ್ವೆ:
ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಅಸ್ತಿಪಾಸ್ತಿಗಳ ಮತ್ತು ಮನೆಗಳ ಭೇಟಿ ನೀಡಿ ಸಂಪೂರ್ಣವಾಗಿ ಕೂಲಂಕುಶವಾಗಿ ಅಧಿಕಾರಿ, ಸಿಬ್ಬಂದಿ ದಾಖಲಾತಿಗಳನ್ನು ಪರಿಶೀಲಿಸಿ ಸಂಪೂರ್ಣವಾಗಿ ಮಾಸ್ಟರ್ ಪ್ಲಾನ್ ಆವರಣದಲ್ಲಿ ಬರುವ ಮನೆಗಳು ಸೇರಿದಂತೆ ನಿವೇಶನಗಳನ್ನು ಸಹ ಜಂಟಿ ಸರ್ವೆ ಮಾಡಲಾಗುತ್ತಿದೆ.ಫೆ.27ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಶಾಸಕರ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾಸ್ಟರ್ ಪ್ಲಾನ್ ಆವರಣದಲ್ಲಿ ಬರುವ ಅನಧಿಕೃತ ಕಟ್ಟಡಗಳ ಮತ್ತು ನಿವೇಶನಗಳ ಬಗ್ಗೆ ಜಂಟಿ ಸರ್ವೆ ನಡೆಸಿ ವರದಿ ನೀಡುವಂತೆ ಸೂಚನೆಯ ಮೇರೆಗೆ ಮಲೆ ಮಾದೇಶ್ವರ ಬೆಟ್ಟದಲ್ಲಿ ವಿಶೇಷ ಗ್ರಾಮ ಸಭೆಯನ್ನು ತಾಪಂ ಉಮೇಶ್ ನೇತೃತ್ವದಲ್ಲಿ ಸಭೆ ನಡೆದು ನಂತರ ಜಂಟಿಯಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಸಿಬ್ಬಂದಿ ಕಂದಾಯ ಇಲಾಖೆ ಹಾಗೂ ಗ್ರಾಪಂ ಮಾದೇಶ್ವರ ಬೆಟ್ಟ ಸಹಯೋಗದೊಂದಿಗೆ ಮಾಸ್ಟರ್ ಪ್ಲಾನ್ ಆವರಣದಲ್ಲಿ ಜಂಟಿ ಸರ್ವೆ ನಡೆಯುತ್ತಿದೆ. ಈಗಾಗಲೇ ಊರ ಬಸಪ್ಪನ ಒಟ್ಟು ಹಾಗೂ ಪುದೂರು ಗ್ರಾಮದಲ್ಲಿ ಜಂಟಿ ಸರ್ವೆ ನಡೆಯುತ್ತಿದೆ. ಉಳಿದಂತೆ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಗುರುನಗರ ದೀಪದ ಬಿಜಿಎಸ್ ಹಿಂಭಾಗ ಸಂಪೂರ್ಣ ಜಂಟಿ ಸರ್ವೆ ನಡೆಸಿ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಉಪ ವಿಭಾಗಾಧಿಕಾರಿ ಅವರಿಗೆ ವರದಿ ನೀಡಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಶಿವಕುಮಾರ್, ಗ್ರಾಮಲೆಕ್ಕಿಗರಾದ ವಿನೋದ್, ಕಾರ್ತಿಕ್, ಶಿವರಾಮ್ ಕುಮಾರ್, ಮಹದೇವ್ ಪ್ರಸಾದ್ ,ಅನಿಲ್ ರಾಜು, ಶಿವಮೂರ್ತಿ ಹಾಗೂ ಮಲೆಮಾದೇಶ್ವರ ಬೆಟ್ಟ ಗ್ರಾಪಂ ಅಭಿವೃದ್ಧಿ ಅಧಿಕಾರಿ ಕಿರಣ್ ಹಾಗೂ ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಉಪಸ್ಥಿತರಿದ್ದರು.