ಸಾರಾಂಶ
ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಮನವಿ ಮಾಡಿಕೊಂಡಿದ್ದಾರೆ.
ಚಿಕ್ಕೋಡಿ: ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಮನವಿ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭಧಲ್ಲಿ ಮುಂಬೈನ ಭೀವಂಡಿಯಲ್ಲಿ ದೇವೇಂದ್ರ ಫಡ್ನವೀಸ್‌ರನ್ನು ಭೇಟಿಯಾದ ಜೊಲ್ಲೆ ದಂಪತಿ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಲೋಕಸಭಾ ಕ್ಷೇತ್ರದ ಶಾಸಕರ ನಿಯೋಗ ಭೇಟಿ ಮಾಡಿ, ನೀರು ಬಿಡಲು ಮನವಿ ಮಾಡಿತ್ತು. ಇದೀಗ ಮತ್ತೊಮ್ಮೆ ಅದನ್ನು ನೆನೆಪಿಸಿ ಮಹಾರಾಷ್ಟ್ರದಿಂದ ಕೃಷ್ಣಾ, ವೇದಗಂಗಾ ಹಾಗೂ ಹಿಡಕಲ್ ಜಲಾಶಯಕ್ಕೆ ಶೀಘ್ರವೇ ನೀರು ಬಿಡುವಂತೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಕ್ಷಣವೇ ನೀರು ಬಿಡುವ ಭರವಸೆ ನೀಡಿದ್ದಾರೆ.