ಸಾರಾಂಶ
ಬೆಂಗಳೂರಲ್ಲಿ ಪೊಲೀಸರಿಗೆ ಪರಿಸರವಾದಿ ದೂರು
ಗುಂಡ್ಲುಪೇಟೆ: ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್, ಸಹಾಯಕ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್ ಕುಮಾರ್ ಬೆದರಿಕೆ ಹಾಕಿದ್ದಾರೆಂದು ಪರಿಸರವಾದಿ ಜೋಸೆಫ್ ಹೂವರ್ ಪೊಲೀಸರಿಗೆ ದೂರು ನೀಡಿದ್ದಾರೆ.ಕಳೆದ ಮೂರು ದಿನಗಳ ಹಿಂದೆ ಪರಿಸರವಾದಿ ಜೋಸೆಫ್ ಹೂವರ್‌ಗೆ ಬಂಡೀಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್ ಕುಮಾರ್ ಮೊಬೈಲ್ ಮೂಲಕ ಕರೆ ಮಾಡಿದ್ದು ಆಗ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್ ಬೆದರಿಕೆ ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ ತೆಗೆದು ಹಾಕು ಇಲ್ಲವಾದಲ್ಲಿ ನಿನ್ನನ್ನು ಬಿಡುವುದಿಲ್ಲ, ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿ, ನನಗೆ ತೊಂದರೆ ಕೊಡುತ್ತಿರುವ ಕಾರಣ ಇಬ್ಬರು ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಏನಿದು ಪ್ರಕರಣ:ಕಳೆದ ಮೂರು ದಿನಗಳ ಹಿಂದೆ ಪರಿಸರವಾದಿ ಜೋಸೆಫ್ ಹೂವರ್ ಸಾಮಾಜಿಕ ಜಾಲತಾಣಗಳಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಿಬ್ಬಂದಿಗೆ ಸರಿಯಾಗಿ ಮೂಲಸೌಲಭ್ಯ ಇಲ್ಲ ಹಾಗೂ ಅಲ್ಲಿನ ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಹಂಚಿಕೊಂಡಿದ್ದರು.ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್ ಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಇಲ್ಲ ಎನ್ನುವುದಾದರೆ ಸಿಡಿಆರ್ ತೆಗೆಸಲಿ, ನನಗೂ ಆ ಇಬ್ಬರು ಅಧಿಕಾರಿಗಳು ಮಂಪರು ಪರೀಕ್ಷೆ ನಡೆಸಿದರೆ ನಿಜಾಂಶ ಹೊರ ಬರಲಿದೆ. ಸರ್ಕಾರ ಈ ಬಗ್ಗೆ ತನಿಖೆ ನಡೆಸಲಿ ನನ್ನದು ತಪ್ಪಾಗಿದ್ದರೆ ಕಾಲು ಹಿಡಿದು ಕ್ಷಮೆ ಕೇಳುತ್ತೇನೆ. ಇಲ್ಲ ಅಧಿಕಾರಿಗಳಿಬ್ಬರು ರಾಜೀನಾಮೆ ಕೊಡಲಿ.-ಜೋಸೆಪ್ ಹೂವರ್, ಪರಿಸರವಾದಿ