ಉತ್ತಮ ಪತ್ರಿಕೆ ಜನಮನವನ್ನು ಸೆಳೆಯುವ ಮೂಲಕ ಸಮಾಜವನ್ನು ಸಕಾರಾತ್ಮಕವಾಗಿ ರೂಪಿಸುತ್ತದೆ; ಅದೇ ಸುಳ್ಳು ಅಥವಾ ದಾರಿತಪ್ಪಿಸುವ ಮಾಹಿತಿಯನ್ನು ನೀಡುವ ಪತ್ರಿಕೆ ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ ಜವಾಬ್ದಾರಿಯುತ ಪತ್ರಿಕೋದ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಭಾಷೆಯ ಮೇಲೆ ದೃಢವಾದ ಹಿಡಿತ ಮತ್ತು ಕೌಶಲ್ಯಾಭಿವೃದ್ಧಿ ವಿದ್ಯಾರ್ಥಿಗಳ ವೃತ್ತಿಜೀವನದಲ್ಲಿ ಯಶಸ್ಸಿನ ಪ್ರಮುಖ ಅಂಶಗಳಾಗಿವೆ ಎಂದು ಮಹಾರಾಜ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಷಣ್ಮುಗಂ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ರೂಸಾ 2.0 ಯೋಜನೆಯ ಅಡಿಯಲ್ಲಿ ಎರಡು ದಿನಗಳು ಏರ್ಪಡಿಸಿರುವ ‘ವೃತ್ತಿ ಅವಕಾಶಗಳು ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು’ ವಿಷಯದ ಕಾರ್ಯಾಗಾರವನ್ನು ಬುಧವಾರ

ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೋದ್ಯಮವು ಸಮಾಜದ ದಿಕ್ಕನ್ನು ರೂಪಿಸುವ ಶಕ್ತಿಯುತ ಮಾಧ್ಯಮವಾಗಿದ್ದು ಎಂದರು.

ಉತ್ತಮ ಪತ್ರಿಕೆ ಜನಮನವನ್ನು ಸೆಳೆಯುವ ಮೂಲಕ ಸಮಾಜವನ್ನು ಸಕಾರಾತ್ಮಕವಾಗಿ ರೂಪಿಸುತ್ತದೆ; ಅದೇ ಸುಳ್ಳು ಅಥವಾ ದಾರಿತಪ್ಪಿಸುವ ಮಾಹಿತಿಯನ್ನು ನೀಡುವ ಪತ್ರಿಕೆ ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ ಜವಾಬ್ದಾರಿಯುತ ಪತ್ರಿಕೋದ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದೆ ಎಂದು ಅವರು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಸಂವಹನ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕವಾಗಿದ್ದು, ಅದು ವ್ಯಕ್ತಿತ್ವ ವಿಕಾಸಕ್ಕೂ ದಾರಿಯಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮೈಸೂರು ವಿಶ್ವವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಜೆ. ಲೋಹಿತ್‌ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭಾಷಾ ಪ್ರಾವೀಣ್ಯತೆ ಮತ್ತು ಪರಿಣಾಮಕಾರಿ ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು.

ಮತ್ತೊಬ್ಬ ಸಂಪನ್ಮೂಲ ವ್ಯಕ್ತಿಯಾದ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿಯ ಉಪನಿರ್ದೇಶಕ ಜಿ. ಜಡಿಯಪ್ಪ ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿ, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವೃತ್ತಿಜೀವನ ನಿರ್ಮಿಸಿಕೊಳ್ಳಲು ಸಾಧ್ಯ ಎಂದರು.

ಯೋಗಶ್ರೀ ಮತ್ತು ಚಂದ್ರಲಾ ಪ್ರಾರ್ಥಿಸಿದರು, ಮಹದೇವ ಪ್ರಸಾದ್ ಸ್ವಾಗತಿಸಿದರು, ನಂದೀಶ ವಂದಿಸಿದರು. ಎಂ.ಕೆ. ಕೀರ್ತನಾ, ಪಿ. ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಅಧ್ಯಾಪಕರಾದ ಡಾ. ಗೋಪಾಲ್, ಡಾ. ಶ್ವೇತಾ ಎಂ. ಹನ್ಸ್, ಕೇಶವಮೂರ್ತಿ, ಡಾ.ಎನ್‌. ನವೀನ್‌ ಹಾಗೂ ಇತರ ವಿಭಾಗಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಜಲ ಸಾಹಸ, ಭೂ ಸಾಹಸ ಕ್ರೀಡಾ ತರಬೇತಿಗೆ ಅರ್ಜಿ ಆಹ್ವಾನಕನ್ನಡಪ್ರಭ ವಾರ್ತೆ ಮೈಸೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲೆಯ 18 ರಿಂದ 29 ವರ್ಷದೊಳಗಿನ ಯುವಕ, ಯುವತಿಯರಿಗೆ ಜಲ ಸಾಹಸ ಕ್ರೀಡೆಯನ್ನು ವರುಣ ಕೆರೆ ಮತ್ತು ಭೂ ಸಾಹಸ ಕ್ರೀಡೆಯನ್ನು ಪಾಂಡವಪುರದ ಕುಂತಿಬೆಟ್ಟದಲ್ಲಿ ಇಂಡಿಯನ್ ಮೌಂಟನೇರಿಂಗ್ ಫೌಂಡೇಷನ್ ಮತ್ತು ಕರ್ನಾಟಕ ರಾಫ್ಟಿಂಗ್ ಅಸೋಸಿಯೇಷನ್ ಸಹಯೋಗದೊಂದಿಗೆ ಫೆಬ್ರವರಿ ಕೊನೆಯ ವಾರದಲ್ಲಿ ನಡೆಸಲು ತೀರ್ಮಾನಿಸಿದೆ.

ಭೂ ಸಾಹಸ ಮತ್ತು ಜಲ ಸಾಹಸ ಕ್ರೀಡಾ ತರಬೇತಿಯಲ್ಲಿ ಜಿಲ್ಲೆಯಿಂದ ಭಾಗವಹಿಸಲು ಇಚ್ಛಿಸುವ 18 ರಿಂದ 29 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಜಿಲ್ಲೆಯ ಅಭ್ಯರ್ಥಿಗಳು ಸ್ವವಿವರದೊಂದಿಗೆ ಫೆ. 24 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಇಲ್ಲಿನ ದೂ. 2564179 ಮತ್ತು ಎಂ.ವಿಶ್ವ ಅವರನ್ನು ಮೊ. 9481075364 ಮೂಲಕ ಸಂಪರ್ಕಿಸಬಹುದು.