ಪತ್ರಿಕೋದ್ಯಮ ನಿಂತ ನೀರಲ್ಲ, ಅದೊಂದು ಅದ್ಭುತವಾದ ಲೋಕ

| Published : Aug 20 2025, 02:00 AM IST

ಸಾರಾಂಶ

ಪತ್ರಿಕೋದ್ಯಮ ನಿಂತ ನೀರಲ್ಲ, ಅದೊಂದು ಅದ್ಭುತವಾದ ಲೋಕ. ಇಲ್ಲಿ ಉದ್ಯೋಗಾವಕಾಶಗಳು ವಿಪುಲವಾಗಿವೆ. ಅದರಲ್ಲೂ ಯುವತಿಯರು ಪತ್ರಿಕೋದ್ಯಮದಲ್ಲಿ ಉನ್ನತ ಶಿಕ್ಷಣ ಪಡೆದು ದೊಡ್ಡ ಸಾಧನೆ ಮಾಡಬಹುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಓಂಕಾರ ಕಾಕಡೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಪಟ್ಟಣದ ಅಕ್ಕಮಹಾದೇವಿ ಮಹಿಳಾ ಪದವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ಧ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಅವಕಾಶಗಳು ಕುರಿತ ರಾಜ್ಯಮಟ್ಟದ ಕಾರ್ಯಾಗಾರದ ನೇತೃತ್ವ ವಹಿಸಿ ಮಾತನಾಡಿದ ಅವರು, ಸಮೂಹ ಮಾಧ್ಯಮ ಇಂದು ದೊಡ್ಡ ಶಕ್ತಿಯಾಗಿ ಬೆಳೆದಿದೆ. ಹಿಂದಿನಗಿಂತಲೂ ಹೆಚ್ಚು ಅವಕಾಶಗಳಿವೆ. ಮಹಿಳಾ ಯುವ ಜನಾಂಗ ಈಕಡೆಗೆ ಆಕರ್ಷಿತರಾಗಬೇಕು ಎಂದು ತಿಳಿಸಿದರು.ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಸಂದೀಪ ನಾಯಕ ಮಾತನಾಡಿ, ಪತ್ರಿಕೋದ್ಯಮದ ವಿವಿಧ ಆಯಾಮಗಳನ್ನು ತಿಳಿಸಿಕೊಟ್ಟರು. ಹಿರಿಯ ಪತ್ರಕರ್ತ ಈಶ್ವರ ಹೋಟಿ ಕಾರ್ಯಾಗಾರ ಉದ್ಘಾಟಿಸಿದರು. ಪ್ರಾಚಾರ್ಯ ಡಾ.ಸಿ.ಬಿ.ಗಣಾಚಾರಿ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ತುರಮರಿ, ಉಪನ್ಯಾಸಕ ಎಂ.ಎಚ್.ಪೆಂಟೇದ ಆಗಮಿಸಿದ್ದರು. ನೂರಾರು ವಿದ್ಯಾರ್ಥಿನೀಯರು ಕಾಲೇಜು ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು. ಲಕ್ಷ್ಮೀ ಮುನ್ನೆನಿ ಸ್ವಾಗತಿಸಿದರು. ವಿಜಯಲಕ್ಷ್ಮೀ ಉಳವಿ ಹಾಗೂ ನಿಶಾ ಮುಕುಂದ ನಿರೂಪಿಸಿದರು. ಜ್ಯೋತಿ ಬೀಸನಕೊಪ್ಪ ವಂದಿಸಿದರು. ಸಮೂಹ ಮಾಧ್ಯಮ ಇಂದು ದೊಡ್ಡ ಶಕ್ತಿಯಾಗಿ ಬೆಳೆದಿದೆ. ಹಿಂದಿನಗಿಂತಲೂ ಹೆಚ್ಚು ಅವಕಾಶಗಳಿವೆ. ಮಹಿಳಾ ಯುವ ಜನಾಂಗ ಈಕಡೆಗೆ ಆಕರ್ಷಿತರಾಗಬೇಕು.

-ಪ್ರೊ.ಡಾ.ಓಂಕಾರ ಕಾಕಡೆ, ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು.