ಪತ್ರಿಕೋದ್ಯಮ ಜನ-ಸರ್ಕಾರದ ಮಧ್ಯದ ಕೊಂಡಿ

| Published : Jul 28 2024, 02:08 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೀಳಗಿ ಇಂದಿನ ದಿನಗಳಲ್ಲಿ ಜನರಿಗೆ ಸುಲಭವಾಗಿ ಸುದ್ದಿ ತಿಳಿಯುವಂತೆ ಮಾಡಿ ಪತ್ರಿಕೋದ್ಯಮವು ಸಮಾಜದಲ್ಲಿನ ಆಗು-ಹೋಗುಗಳಿಗೆ ಸ್ಪಂದಿಸಿ ಸರ್ಕಾರ ಮತ್ತು ಜನರ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು. ಬಾಡಗಂಡಿಯ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ಬೀಳಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಇಂದಿನ ದಿನಗಳಲ್ಲಿ ಜನರಿಗೆ ಸುಲಭವಾಗಿ ಸುದ್ದಿ ತಿಳಿಯುವಂತೆ ಮಾಡಿ ಪತ್ರಿಕೋದ್ಯಮವು ಸಮಾಜದಲ್ಲಿನ ಆಗು-ಹೋಗುಗಳಿಗೆ ಸ್ಪಂದಿಸಿ ಸರ್ಕಾರ ಮತ್ತು ಜನರ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.

ಬಾಡಗಂಡಿಯ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ಬೀಳಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪತ್ರಿಕೆಗಳು ವಿಶ್ವದಲ್ಲಿ ನಡೆಯುವ ಪ್ರಸ್ತುತ ಸುದ್ದಿಗಳು, ರಾಜಕೀಯ ಬೆಳವಣಿಗೆಗಳು, ಆವಿಷ್ಕಾರಗಳು ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಮಾಹಿತಿಯನ್ನು ಸ್ಪಷ್ಟವಾಗಿ ಸತ್ಯಾಸತ್ಯತೆಯೊಂದಿಗೆ ನೀಡುವ ಕಾರ್ಯ ಮಾಡುತ್ತಿವೆ. ಇದರಿಂದ ಎಲ್ಲರಿಗೂ ಜ್ಞಾನಾರ್ಜನೆ ಹಾಗೂ ಮಾಹಿತಿಗಳು ತಲುಪುತ್ತಿವೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಮಾತನಾಡಿ, ದೇಶದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸುದ್ದಿಗಳನ್ನು ಕ್ಷಣ ಮಾತ್ರದಲ್ಲಿ ಮುಟ್ಟಿಸುವ ಪತ್ರಿಕಾರಂಗ, ವಸ್ತುನಿಷ್ಠ ಸುದ್ದಿಗಳ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಹಕ್ಕು ಪ್ರತಿಯೊಬ್ಬ ಪತ್ರಕರ್ತನಿಗಿದೆ. ಆ ದಿಸೆಯಲ್ಲಿ ತಾಲೂಕಿನ ಕಾನಿಪ ಬಳಗ ಕಾರ್ಯನಿರ್ವಹಿಸುತ್ತಿರುವುದು ಸಂತಸದ ವಿಷಯ. ಪ್ರತಿದಿನ ಹೊಸತನ್ನು ಕಲಿಯಲು ಪತ್ರಿಕೋದ್ಯಮ ಪ್ರೇರೇಪಿಸುತ್ತದೆ. ಯಾವುದೇ ರೀತಿಯ ಸವಾಲನ್ನು ಎದುರಿಸಲು ಧೈರ್ಯ ತುಂಬುವ ಶಕ್ತಿ ಪತ್ರಿಕೋದ್ಯಮ ಕ್ಷೇತ್ರಕ್ಕಿದೆ ಎಂದರು.

ಉಪನ್ಯಾಸ ನೀಡಿದ ಉದಯವಾಣಿ ಜಿಲ್ಲಾ ವರದಿಗಾರ ಶ್ರೀಶೈಲ ಬಿರಾದಾರ, ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕಾಲಕ್ಕೆ ತಕ್ಕಂತೆ ಆದ ಬದಲಾದ ವೈಖರಿ ಹಾಗೂ ಪ್ರಸ್ತುತ ವೃತ್ತಿಯಲ್ಲಿ ತೊಡಗಿಕೊಂಡವರು ಮಾಡಿಕೊಳ್ಳಬೇಕಾದ ಬದಲಾವಣೆ ಕುರಿತು ಅವಲೋಕನದ ಬಗ್ಗೆ ಮಾಹಿತಿ ನೀಡಿದರು.

ಸಾನಿಧ್ಯ ವಹಿಸಿದ್ದ ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಎಸ್.ಆರ್‌.ಪಾಟೀಲ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎನ್.ಪಾಟೀಲ್ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಕಿರಣ ಬಾಳಗೋಳ ಆಸೆಯ ನುಡಿ ಹೇಳಿದರು.

ಎಸ್.ಆರ್.ಪಾಟೀಲ ಮೆಡಿಕಲ್ ಕಾಲೇಜನ ಡೀನ್ ಧರ್ಮರಾಯ ಇಂಗಳೆ, ಯುವ ಉದ್ಯಮಿ ಆನಂದ ಇಂಗಳಗಾಂವಿ, ಜಿಲ್ಲಾ ಡಿಎಸ್ಎಸ್ ಸಂಚಾಲಕ ಮಹಾದೇವ ಹಾದಿಮನಿ, ಬಿಇಒ ಆರ್.ಎಸ್.ಆದಾಪೂರ, ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯರಾದ ಚನ್ನಬಸು ಚಲವಾದಿ, ವಿರುಪಾಕ್ಷಯ್ಯ ಹಿರೇಮಠ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕರ್ನಾಟಕ ಜಾನಪದ ಪರಷತ್‌ನ ತಾಲೂಕು ಅಧ್ಯಕ್ಷ ಶೇಖರ ಗೋಳಸಂಗಿ ನಿರೂಪಿಸಿದರು, ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಸ್ವಾಗತಿಸಿದರು, ಪತ್ರಕತ೯ ಕಾಶಿನಾಥ್ ಸೋಮನಕಟ್ಟಿ ವಂದಿಸಿದರು.

ಸನ್ಮಾನ: ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಎಸ್ಸೆಸ್ಸೆಲ್ಸಿಯಲ್ಲಿ ನಿಖಿತಾ ಹಂಡಗಿ, ಗುರು ಸಾವಕಾರ, ಜಯಾ ಸಾವಕಾರ, ಪಿಯುಸಿಯಲ್ಲಿ ಅಕ್ಷತಾ ಚಲವಾದಿ, ಸುಕೃತಾ ಸುಣಗಾರ, ದೀಪಾ ಗಚ್ಚಿನಮನಿ ಅವರನ್ನು ಸನ್ಮಾನಿಸಲಾಯಿತು.