ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪತ್ರಕರ್ತರ ಸಂಘದ ಆಕ್ರೋಶ

| Published : Mar 15 2024, 01:18 AM IST

ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪತ್ರಕರ್ತರ ಸಂಘದ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರು ಮಾಧ್ಯಮದವರನ್ನು ನಾಯಿಗೆ ಹೋಲಿಸಿ, ಹೀಯಾಳಿಸಿರುವುದನ್ನು ಖಂಡಿಸಿ ಗುರುವಾರ ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಸೀಲ್ದಾರ್ ದತ್ತಾತ್ರೆಯ ಅವರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿರಾ

ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರು ಮಾಧ್ಯಮದವರನ್ನು ನಾಯಿಗೆ ಹೋಲಿಸಿ, ಹೀಯಾಳಿಸಿರುವುದನ್ನು ಖಂಡಿಸಿ ಗುರುವಾರ ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಸೀಲ್ದಾರ್ ದತ್ತಾತ್ರೆಯ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎನ್.ಜಯಪಾಲ್, ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದರಾದ ಅನಂತಕುಮಾರ ಅವರು ಮಾತನಾಡುತ್ತ ಆನೆ ಹೋಗಿದ್ದೆ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ರಾಜ್ಯದ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಮಾಡಿದ ಅವಮಾನವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸತ್ ಸದಸ್ಯರಾದ ಅನಂತಕುಮಾರ್ ಹೆಗಡೆ ಅವರು ಈ ಕೂಡಲೇ ಬೇಷರತ್ ಮಾಧ್ಯಮದವರನ್ನು ಬಹಿರಂಗವಾಗಿ ಕ್ಷಮೆ ಕೇಳಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆ ಕೊಡಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ದಶರಥ, ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜು.ಎನ್, ಖಜಾಂಚಿ ಎಸ್.ಕೆ.ಕುಮಾರ್, ಪತ್ರಕರ್ತರಾದ ಶಿವಕುಮಾರ್, ವಿಜಯಕುಮಾರ್, ಎಂ.ಎಲ್.ನಾಗರಾಜು, ಬಾಲಕೃಷ್ಣೇಗೌಡ, ಜಿ.ಆರ್.ನಟರಾಜು, ಟಿ.ಎಲ್.ನಟರಾಜು ಸೇರಿದಂತೆ ಹಲವರು ಹಾಜರಿದ್ದರು.