ಸಾರಾಂಶ
ಪತ್ರಕರ್ತರು ಸವಾಲಿನ ನಡುವೆ ಉತ್ತಮವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರು ತಿಳಿಸಿದರು. ಹನೂರಿನಲ್ಲಿ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಹನೂರು
ಪತ್ರಕರ್ತರು ಸವಾಲಿನ ನಡುವೆ ಉತ್ತಮವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರು ತಿಳಿಸಿದರು.ಪಟ್ಟಣದ ಕಮ್ಮವಾರಿ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹನೂರು ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದಿಂದ ಸಲ್ಲಿಸಲಾದ ಮನವಿ ಪತ್ರವನ್ನು ಪುರಸ್ಕರಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಗುರುತಿಸಿಕೊಂಡಿರುವ ಪತ್ರಿಕಾ ರಂಗಕ್ಕೆ ತಮ್ಮದೇ ಆದ ಕೊಡುಗೆ ಇದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಕನಿಷ್ಠ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ನಾನು ಶಾಸಕರ ಅನುದಾನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಭವನ ಕಟ್ಟಡ ನಿರ್ಮಾಣಕ್ಕೆ ಬೇಕಾದ ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು. ಮುಂದಿನ ವರ್ಷದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ವಂತ ಕಟ್ಟಡದಲ್ಲಿ ಪತ್ರಿಕಾ ದಿನಾಚರಣೆ ನಡೆಯುವಂತಾಗಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಮುಖಂಡರಾದ ಮಂಜೇಶ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ ನಾಯ್ಡು, ಅಧ್ಯಕ್ಷ ಮಹಾದೇಶ್, ಪ್ರಧಾನ ಕಾರ್ಯದರ್ಶಿ ಬಸವರಾಜು ಸೇರಿದಂತೆ ಸಂಘದ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.