ಸಾರಾಂಶ
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ ಎನ್ ಚಂದ್ರಮೋಹನ್ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ ಎನ್ ಚಂದ್ರಮೋಹನ್ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ ಜೆ ಶಿವರಾಜ್ ಆಯ್ಕೆಗೊಂಡಿದ್ದಾರೆ.2025-28 ರ ಸಾಲಿನ ಆಡಳಿತ ಮಂಡಳಿಯ ಚುನಾವಣೆ ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಮಹಮ್ಮದ್ ಮುಸ್ತಫಾ, ಕಾರ್ಯದರ್ಶಿಯಾಗಿ ಕೆ ಕೆ ನಾಗರಾಜ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎರಡು ನಿರ್ದೇಶಕ ಸ್ಥಾನಗಳಿಗೆ ಮೂರು ನಾಮಪತ್ರ ಸಲ್ಲಿಕೆಯಾಗಿದ್ದು, ಜಯಪ್ರಕಾಶ್ ನಾಮಪತ್ರ ಹಿಂತೆಗೆದುಕೊಂಡ ಕಾರಣ ನಿರ್ದೇಶಕರಾಗಿ ಹೆಚ್ ವಿ ವಿನೋದ್ ಮತ್ತು ರಘು ಹೆಬ್ಬಾಲೆ ಅವರು ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾ ಅಧಿಕಾರಿಯಾಗಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಗ್ರಂಥಪಾಲಕರಾದ ಎಸ್ ನಂದೀಶ್ ಮತ್ತು ಚುನಾವಣಾ ವೀಕ್ಷಕರಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಪಾರ್ಥ ಚಿಣ್ಣಪ್ಪ ಕಾರ್ಯನಿರ್ವಹಿಸಿದರು.