ಸಾರಾಂಶ
ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವ ಕುಂಬೂರು ಅವಿರೋಧ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವ ಕುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಕೆ.ಭಾಸ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಎಸ್.ಡಿ.ವಿಜೇತ್, ಖಚಾಂಚಿಯಾಗಿ ಬಿ.ಎ.ಭಾಸ್ಕರ್, ನಿರ್ದೇಶಕರಾಗಿ ವಿಜಯ್ ಹಾನಗಲ್ಲು, ಚೆರಿಯಮನೆ ಸುರೇಶ್, ಹಿರಿಕರ ರವಿ, ದಿನೇಶ್ ಮಾಲಂಬಿ, ಲಕ್ಮೀಕಾಂತ್ ಕೊಮಾರಪ್ಪ ಆಯ್ಕೆಯಾದರು.ಶನಿವಾರ ಪತ್ರಿಕಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸೋಮವಾರಪೇಟೆ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ಸಿಇಒ ರವೀಂದ್ರ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ನವೀನ್ ಸುವರ್ಣ ವೀಕ್ಷಕರಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವಿಜಯ್ ಹಾನಗಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶ್ವ ಕುಂಬೂರು ಅಧಿಕಾರ ವಹಿಸಿಕೊಂಡರು.ಅಧಿಕಾರ ಸ್ವೀಕರಿಸಿ ಮಾತನಾಡಿದ ವಿಶ್ವಕುಂಬೂರು ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ವ ಸದಸ್ಯರ ಸಹಕಾರದಿಂದ ಕೆಲಸ ಮಾಡಲಾಗುವುದು ಎಂದು ಹೇಳಿದರು.