ಸಾರಾಂಶ
ಪ್ರತಿವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಭವನದಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಕೇರಂ ಕ್ರೀಡಾಕೂಟವನ್ನು ಜಿಲ್ಲಾ ವಾರ್ತಾಧಿಕಾರಿ ಮೀನಾಕ್ಷಿ ಅವರು ಕೇರಂ ಆಟ ಆಡುವುದರ ಮೂಲಕ ಚಾಲನೆ ನೀಡಿದರು. ಮುಂದಿನ ಕ್ರೀಡೆಗಳನ್ನು ಕೂಡ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರಿಸುವಂತೆ ಮನವಿ ಮಾಡಿದರು. ಕ್ರೀಡೆಗಳಲ್ಲಿ ಗೆಲುವು ಸೋಲು ಸಾಮಾನ್ಯ. ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು, ಶಾಂತಿಯುತವಾಗಿ ಎಲ್ಲರೂ ಕ್ರೀಡೆಗಳಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಹೇಳಿದರು.
ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಭವನದಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಕೇರಂ ಕ್ರೀಡಾಕೂಟವನ್ನು ಜಿಲ್ಲಾ ವಾರ್ತಾಧಿಕಾರಿ ಮೀನಾಕ್ಷಿ ಅವರು ಕೇರಂ ಆಟ ಆಡುವುದರ ಮೂಲಕ ಚಾಲನೆ ನೀಡಿದರು.
ನಂತರ ಉದ್ದೇಶಿಸಿ ಮಾತನಾಡಿ, ಪತ್ರಕರ್ತರು ಎಂದರೇ ತಮ್ಮ ವೃತ್ತಿ ಜೀವನದಲ್ಲಿ ಸದಾ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಆದರೆ ಬಿಡುವಿನ ಸಮಯ ಮಾಡಿಕೊಂಡು ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ನಮ್ಮಲ್ಲಿನ ಭಾವನಾತ್ಮಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ ಎಂದರು. ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ ಈ ನಿಟ್ಟಿನಲ್ಲಿ ಇನ್ನಷ್ಟು ಕ್ರೀಡಾ ಚಟುವಟಿಕೆಗಳು ನಡೆಯಬೇಕು ಎಂದು ಕರೆ ನೀಡಿದರು.ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್. ಪ್ರಸನ್ನ ಕುಮಾರ್ ಮಾತನಾಡಿ, ಸೌಹಾರ್ದತೆ ಹಾಗೂ ಸಹೋದರತ್ವ ಬೆಳೆಸುವ ನಿಟ್ಟಿನಲ್ಲಿ ಕ್ರೀಡಾಕೂಟಗಳು ಸಹಾಯಕವಾಗುತ್ತದೆ. ಈ ಹಿಂದೆ ಕ್ರಿಕೆಟ್ ಹಾಗೂ ಇನ್ನಿತರ ಕ್ರೀಡೆಗಳಲ್ಲಿ ಕೂಡ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದ್ದೀರಿ. ಅದೇ ರೀತಿ ಮುಂದಿನ ಕ್ರೀಡೆಗಳನ್ನು ಕೂಡ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರಿಸುವಂತೆ ಮನವಿ ಮಾಡಿದರು. ಕ್ರೀಡೆಗಳಲ್ಲಿ ಗೆಲುವು ಸೋಲು ಸಾಮಾನ್ಯ. ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು, ಶಾಂತಿಯುತವಾಗಿ ಎಲ್ಲರೂ ಕ್ರೀಡೆಗಳಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್, ಉಪಾಧ್ಯಕ್ಷ ಕೆ.ಎಂ. ಹರೀಶ್, ಜಿಲ್ಲಾ ಕಾರ್ಯದರ್ಶಿಗಳಾದ ಪಿ.ಎ. ಶ್ರೀನಿವಾಸ್, ಸಿ.ಬಿ. ಸಂತೋಷ್ ಇತರರು ಇತರರು ಉಪಸ್ಥಿತರಿದ್ದರು.