ಸಾರಾಂಶ
ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗೆ ಡಿಸಿ ನಿತೀಶ್ ಕೆ. ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಪತ್ರಕರ್ತರು ಒತ್ತಡದ ಮಧ್ಯೆ ಕೆಲಸ ಮಾಡುತ್ತಿದ್ದು, ಒತ್ತಡ ಕಡಿಮೆ ಮಾಡಲು ಕ್ರೀಡೆಯಲ್ಲಿ ತೊಡಗಿ ಆರೋಗ್ಯದ ಕಡೆಗೆ ಗಮನ ಕೊಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.ಹೇಳಿದರು.ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ, ಪತ್ರಕರ್ತರ ವೃತ್ತಿ ಜೀವನವು ಒತ್ತಡ ಹೆಚ್ಚಿರುತ್ತದೆ. ಇದರ ಮಧ್ಯೆಯೂ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ, ವ್ಯಾಯಾಮ ದಿನನಿತ್ಯದ ಅವಿಭಾಜ್ಯ ಅಂಗವಾಗಿರಲಿ, ಇದು ತಮ್ಮ ಕೆಲಸ ಒತ್ತಡವನ್ನು ನಿವಾರಣೆ ಮಾಡುತ್ತದೆ ಎಂದರು.
ಈ ವೇಳೆ ಯುವಜನ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಈರೇಶ ನಾಯಕ, ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಜಿಲ್ಲಾಧ್ಯಕ್ಷ ಆರ್. ಗುರುನಾಥ, ಉಪಾಧ್ಯಕ್ಷ ಶಿವಪ್ಪ ಮಡಿವಾಳ, ಕಾರ್ಯದರ್ಶಿ ಪಾಷ ಹಟ್ಟಿ, ಬಸವರಾಜ ನಾಗಡದಿನ್ನಿ ಸೇರಿದಂತೆ ಸಿಂಧನೂರು, ಮಾನ್ವಿ, ಲಿಂಗಸೂಗುರು, ದೇವದುರ್ಗ, ಸಿರವಾರ, ಹಾಗೂ ರಾಯಚೂರು ಪತ್ರಕರ್ತರು ಸೇರಿ ಅನೇಕರು ಇದ್ದರು.