ಪತ್ರಕರ್ತರು ವಾಸ್ತವತೆ ಬಗ್ಗೆ ಬೆಳಕು ಚೆಲ್ಲಬೇಕು: ಡಾ.ಭಾನುಪ್ರಕಾಶ್ ಶರ್ಮಾ

| Published : Sep 02 2024, 02:07 AM IST

ಪತ್ರಕರ್ತರು ವಾಸ್ತವತೆ ಬಗ್ಗೆ ಬೆಳಕು ಚೆಲ್ಲಬೇಕು: ಡಾ.ಭಾನುಪ್ರಕಾಶ್ ಶರ್ಮಾ
Share this Article
  • FB
  • TW
  • Linkdin
  • Email

ಸಾರಾಂಶ

ಬದಲಾದ ತಾಂತ್ರಿಕ ಜಗತ್ತಿನಲ್ಲಿ ಸಣ್ಣ ಸಣ್ಣ ವಿಷಯಗಳೂ ಸಾರ್ವಜನಿಕ ವಲಯದಲ್ಲಿ ಭಿತ್ತರಗೊಳ್ಳುತ್ತಿವೆ. ಪತ್ರಕರ್ತರ ಸಮಾಜದ ಅಂಕು ಡೊಂಕು ಎತ್ತಿ ಹಿಡಿಯುವ ಜೊತೆಗೆ ಗ್ರಾಮೀಣ ಭಾಗಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಮಾಜದಲ್ಲಿ‌ ಪತ್ರಕರ್ತರ ಪಾತ್ರ ಅಪಾರವಾಗಿದೆ. ವಾಸ್ತವತೆ ಬಗ್ಗೆ ಬೆಳಕು ಚೆಲ್ಲಬೇಕು ಎಂದು ವೇದ ಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ತಿಳಿಸಿದರು.

ಪಟ್ಟಣದ ಬ್ರಾಹ್ಮಣ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ತಮ್ಮ ಜೀವನವನ್ನು ಕಟ್ಟಿಕೊಳ್ಳುವುದರ ಜೊತೆಗೆ ವಾಸ್ತವವನ್ನು ಎತ್ತಿ ಹಿಡಿಯವ ಕೆಲಸ ಮಾಡಬೇಕು ಎಂದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತಿಕೆರೆ ಜಯರಾಮ್ ಮಾತನಾಡಿ, ಬದಲಾದ ತಾಂತ್ರಿಕ ಜಗತ್ತಿನಲ್ಲಿ ಸಣ್ಣ ಸಣ್ಣ ವಿಷಯಗಳೂ ಸಾರ್ವಜನಿಕ ವಲಯದಲ್ಲಿ ಭಿತ್ತರಗೊಳ್ಳುತ್ತಿವೆ. ಪತ್ರಕರ್ತರ ಸಮಾಜದ ಅಂಕು ಡೊಂಕು ಎತ್ತಿ ಹಿಡಿಯುವ ಜೊತೆಗೆ ಗ್ರಾಮೀಣ ಭಾಗಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದರು.

ಇಂದಿನ ತಾಂತ್ರಿಕ ಜಗತ್ತಿನಲ್ಲಿ ಜೈಲಿನೊಳಗಿರುವ ಸೆಲೆಬ್ರಿಟಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಫೋಟೋ, ವೀಡಿಯೋ ಭಿತ್ತರವಾಗುವ ಹಂತಕ್ಕೆ ಬಂದು ನಿಂತಿದ್ದೇವೆ. ಈ ಬಗ್ಗೆ ಪ್ರತಿಯೊಬ್ಬರೂ ಅರಿತರೆ ಒಳ್ಳೆಯದು ಎಂದರು.

ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗಿ ಹೆಚ್ಚಿನ‌ ನೀರು ಸಮುದ್ರದ ಪಾಲಾಗಿದ್ದರೂ ಇಂದಿಗೂ ಗಡಿ ಭಾಗಗಳಲ್ಲಿನ ಕೆರೆ ಕಟ್ಟೆಗಳು ಭರ್ತಿಯಾಗಿಲ್ಲ. ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಜಿಲ್ಲಾಧ್ಯಕ್ಷ ಅಧ್ಯಕ್ಷ ಬಿ.ಪಿ.ಪ್ರಕಾಶ್, ತಾಲೂಕು ಅಧ್ಯಕ್ಷ ಎಸ್.ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕಿನ ಸಂಘದ ಪದಾಧಿಕಾರಿಗಳು, ಹಿರಿಯ, ಕಿರಿಯ ಪತ್ರಕರ್ತರು, ತಾಲೂಕಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.